ಬೆಳ್ಮಣ್ ವೃತ್ತ ಮಟ್ಟದ ಬಾಲಕಿಯರ ತ್ರೋಬಾಲ್ ಪಂದ್ಯಾಟ : ಕಲಂಬಾಡಿ ಪದವು ಶಾಲಾ ತಂಡಕ್ಕೆ ಪ್ರಥಮ ಸ್ಥಾನ

ಕಾರ್ಕಳ : ಬೆಳ್ಮಣ್ ವೃತ್ತ ಮಟ್ಟದ ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ಕಲಂಬಾಡಿ ಪದವು ಶಾಲೆಯ ವಿದ್ಯಾರ್ಥಿನಿಯರ ತಂಡ ಪ್ರಥಮ ಸ್ಥಾನ ಪಡೆದಿದೆ.

ಟ್ರೋಫಿಯೊಂದಿಗೆ ಆಗಮಿಸಿದ ಶಾಲಾ ವಿದ್ಯಾರ್ಥಿನಿಯರ ತಂಡವನ್ನು ಎಸ್‌ಡಿ‌ಎಂ‌ಸಿ ಅಧ್ಯಕ್ಷೆ ಸಂಗೀತ ಆಚಾರ್ಯ, ಉಪಾಧ್ಯಕ್ಷರಾದ ಜಯಂತ್ ನಾಯಕ್, ಮಾಜಿ ಎಸ್‌ಡಿಎಂಸಿ ಅಧ್ಯಕ್ಷರಾದ ದಯಾನಂದ ನಾಯಕ್, ಉಪಾಧ್ಯಕ್ಷರಾದ ಆಶಾಮೂಲ್ಯ, ಎಸ್‌ಡಿ‌ಎಂ‌ಸಿ ಸದಸ್ಯರಾದ ರಾಜೇಶ್ ಆಚಾರ್ಯ, ದಿನೇಶ್ ಆಚಾರ್ಯ, ಶಾಲಾ ಮುಖ್ಯೋಪಾಧ್ಯಾಯರಾದ ನಾಗರಾಜ್ ಬಿ ಸ್ವಾಗತಿಸಿ ಅಭಿನಂದಿಸಿದರು.

ಶಿಕ್ಷಕರಾದ ವಿಜಯಲಕ್ಷ್ಮಿ ಸ್ವಾಗತಿಸಿದರು. ನಮಿತಾ ಕಾರ್ಯಕ್ರಮ ನಿರೂಪಿಸಿದರು. ಆಶಾ ವಂದಿಸಿದರು.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ