ವಿವಿಧ ಬೇಡಿಕೆ ಮುಂದಿಟ್ಟು ಸಿಐಟಿಯುನಿಂದ ಪ್ರತಿಭಟನೆ, ಮನವಿ ಸಲ್ಲಿಕೆ

ಉಡುಪಿ : ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಉಡುಪಿ ವಲಯ ಸಮಿತಿ ನೇತೃತ್ವದಲ್ಲಿ ಇಂದು ಅಗತ್ಯ ವಸ್ತುಗಳ ಬೆಲೆ ಏರಿಕೆ, ಬೀಡಿ ಕಾರ್ಮಿಕರು, ರಿಕ್ಷಾಚಾಲಕರು ಮತ್ತು ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು. ಬಳಿಕ ಅಪರ ಜಿಲ್ಲಾಧಿಕಾರಿ ಮುಖಾಂತರ ರಾಜ್ಯದ ಮುಖ್ಯಮಂತ್ರಿಗೆ ಮನವಿ ನೀಡಲಾಯಿತು.

ಇದೇವೇಳೆ ಉಡುಪಿ ಜಿಲ್ಲಾ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಸಂಘ (ಸಿಐಟಿಯು)ನೇತೃತ್ವದಲ್ಲಿ ಇಂದು ಕಾರ್ಮಿಕರ ಮಕ್ಕಳ ಸ್ಕಾಲರ್ಶಿಪ್ ಹಣ ಬಾಕಿ ಹಾಗೂ ಕಾರ್ಮಿಕರ 14 ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿ ಮುಖಾಂತರ ಕಾರ್ಮಿಕ ಇಲಾಖೆಯ ಕಲ್ಯಾಣ ಮಂಡಳಿಯ ಮುಖ್ಯ ಕಾರ್ಯದರ್ಶಿ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯವರಿಗೆ ಮನವಿ ನೀಡಲಾಯಿತು.

ಪ್ರತಿಭಟನೆಯಲ್ಲಿ ಪಕ್ಷದ ಉಡುಪಿ ವಲಯ ಸಮಿತಿ ಮುಖಂಡರಾದ ಕವಿರಾಜ್. ಎಸ್. ಕಾಂಚನ್, ಉಡುಪಿ ವಲಯ ಕಾರ್ಯದರ್ಶಿ ಶಶಿಧರ ಗೋಲ್ಲ, ರಾಮ ಕಾರ್ಕಡ ನಾಗೇಶ್, ರೀತೆಶ್, ಸಯ್ಯದ್ ಅದೇ ರೀತಿ ಕಟ್ಟಡ ಸಂಘದ ಜಿಲ್ಲಾ ಅಧ್ಯಕ್ಷ‌ರಾದ ಶೇಖರ್ ಬಂಗೇರ ಮತ್ತು ಮತ್ತಿತರರು ಉಪಸ್ಥಿತರಿದ್ದರು.

Related posts

ಮಹಿಳೆಗೆ ಕಟ್ಟಿ ಥಳಿಸಿದ ಪ್ರಕರಣ; ಮತ್ತಿಬ್ಬರು ಆರೋಪಿಗಳಿಗೂ ಹೈಕೋರ್ಟ್ ಜಾಮೀನು

ನವೀಕರಿಸಿದ ಡಯಾಲಿಸಿಸ್ ಘಟಕದ ಉದ್ಘಾಟನೆ

ವಿಶ್ವದ ವೇಗದ ಭಗವದ್ಗೀತಾ ಲೇಖಕ : ಕೇವಲ 5.30 ಗಂಟೆಗಳಲ್ಲಿ 18 ಅಧ್ಯಾಯ ಮತ್ತು 700 ಶ್ಲೋಕಗಳ ಬರಹ ಪೂರ್ಣಗೊಳಿಸಿದ ಅದ್ಭುತ ಸಾಧನೆ!