ಕಿಂಡಿ ಆಣೆಕಟ್ಟಿನಲ್ಲಿ ನೀರಿಗೆ ಬಿದ್ದು ಪೌರ ಕಾರ್ಮಿಕ ಸಾವು

ಶಿರ್ವ : ಪಾದೂರು ಗ್ರಾಮದ ಪೈಂತೂರು ಕಿಂಡಿ ಆಣೆಕಟ್ಟಿನಲ್ಲಿ ಗಾಳ ಹಾಕಿ ಮೀನು ಹಿಡಿಯುತ್ತಿದ್ದ ಪೌರ ಕಾರ್ಮಿಕರೊಬ್ಬರು ಆಕಸ್ಮಿಕವಾಗಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಸಂಭವಿಸಿದೆ.

ಮೃತರನ್ನು ಮಲ್ಲಾರು ಗ್ರಾಮದ ಪಕೀರ್ಣಕಟ್ಟೆ ನಿವಾಸಿ ಸುರೇಶ್(42) ಎಂದು ಗುರುತಿಸಲಾಗಿದೆ. ಕಾಪು ಪುರಸಭೆಯಲ್ಲಿ ಪೌರ ಕಾರ್ಮಿಕರಾಗಿರುವ ಇವರಿಗೆ, ಮೀನು ಹಿಡಿಯುವ ಅಭ್ಯಾಸವಿದ್ದು ಅದರಂತೆ ಮನೆಯಿಂದ ಮೀನು ಹಿಡಿಯಲು ಹೋದವರು ನಾಪತ್ತೆಯಾಗಿದ್ದರು. ಬಳಿಕ ಹುಡುಕಾಟ ನಡೆಸಿದಾಗ ಇವರ ಮೃತದೇಹವು ಪೈಂತೂರು ಕಿಂಡಿ ಅಣೆಕಟ್ಟಿನ ನೀರಿನಲ್ಲಿ ಪತ್ತೆಯಾಗಿದೆ.

ಇವರು ಗಾಳ ಹಾಕಿ ಮೀನು ಹಿಡಿಯುವ ವೇಳೆ ಆಕಸ್ಮಿಕವಾಗಿ ನೀರಿಗೆ ಬಿದ್ದು ಮೃತಪಟ್ಟಿರಬಹುದು ಎಂದು ತಿಳಿದುಬಂದಿದೆ. ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Related posts

ಗ್ರಾಮೀಣ ಬಂಟರ ಸಂಘದ ಸ್ಕಿಲ್ ಡೆವೆಲಪ್ಮೆಂಟ್ ಕೇಂದ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ

ಉಗ್ರರನ್ನು ಸದೆಬಡಿಯಲು ಎಲ್ಲರೂ ಒಗ್ಗಟ್ಟಾಗಿ ಹೋರಾಡಬೇಕು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಪತ್ರಕರ್ತ ಸಂದೀಪ್ ಪೂಜಾರಿಗೆ ಶ್ರದ್ಧಾಂಜಲಿ ಸಭೆ