ಅಮಾನುಷ ಘಟನೆಯಿಂದ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ – ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್

ಉಡುಪಿ : ಸಾತ್ವಿಕರ ನೆಲೆವೀಡಾದ ಕೃಷ್ಣನೂರಿನ ಮಲ್ಪೆ ಬಂದರಿನಲ್ಲಿ ಮೀನು ಕದ್ದಿದ್ದಾರೆ ಎಂಬ ಆರೋಪದಡಿ ದಲಿತ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿರುವ ಅಮಾನುಷ ಘಟನೆಯು ನಾಗರಿಕ ಸಮಾಜವನ್ನು ತಲೆ ತಗ್ಗಿಸುವಂತೆ ಮಾಡಿದೆ ಎಂದು ಉಡುಪಿ ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಮಹಿಳೆ ಮೀನು ಕದ್ದಿದ್ದರೆ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸುವ ಹಕ್ಕು ಮೀನಿನ ಮಾಲೀಕರಿಗಿತ್ತು. ಆದರೆ ಕಾನೂನನ್ನು ಕೈಗೆತ್ತಿಕೊಂಡು ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿ, ಶೌರ್ಯ ಮೆರೆಯುವುದು ಎಷ್ಟು ಸರಿ. ಈ ವಿಕೃತ ಮನಸ್ಥಿತಿಯ ಕೆಲವು ಪುಂಡರಿಂದ ಇಡೀ ಉಡುಪಿ ತಲೆ ತಗ್ಗಿಸುವಂತಾಗಿದೆ.

ಘಟನೆ ನಡೆದ ತಕ್ಷಣ ಪ್ರಕರಣ ದಾಖಲಿಸಬೇಕಾಗಿದ್ದ ಪೋಲಿಸರು ತಡವಾಗಿ ಪ್ರಕರಣ ದಾಖಲಿಸಿರುವ ಹಿಂದೆ ಕಾಣದ ಕೈಗಳ ಕೈವಾಡವಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಇನ್ನಾದರೂ ಪೋಲಿಸ್ ಇಲಾಖೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಹಲ್ಲೆಗೊಳಗಾದ ಮಹಿಳೆಗೆ ಸೂಕ್ತ ನ್ಯಾಯ ದೊರಕಿಸಬೇಕೆಂದು ಅವರು ಆಗ್ರಹಿಸಿದ್ದಾರೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ