ಚಲಿಸುತ್ತಿದ್ದ ಲಾರಿಯಿಂದ ಜಿಗಿದು ನಿರ್ವಾಹಕ ಸಾವು

ನೆಲ್ಯಾಡಿ : ಚಲಿಸುತ್ತಿದ್ದ ಲಾರಿಯಿಂದ ಜಿಗಿದು ಗಂಭೀರ ಗಾಯಗೊಂಡ ನಿರ್ವಾಹಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ಫೆ.25ರಂದು ಮುಂಜಾನೆ ನಡೆದಿದೆ.

ತಮಿಳುನಾಡು ಚಿನ್ನತೂಬುರ್ ನಾಗಪಟ್ಟಿನಮ್ ನಿವಾಸಿ ಲಕ್ಷ್ಮಣನ್ ಸೆಂಗುತ್ತುವನ್(46ವ.) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ

ತಮಿಳುನಾಡಿನ ಕೃಷ್ಣಗಿರಿಯಿಂದ ಕಲ್ಲಂಗಡಿಯನ್ನು ತುಂಬಿಕೊಂಡು ಮಂಗಳೂರಿಗೆ ಬರುತ್ತಿದ್ದ ಲಾರಿಯು ಗುಂಡ್ಯ ಸಮೀಪದ ಅಡ್ಡಹೊಳೆ ತಲುಪುತ್ತಿದ್ದಂತೆ ಏಕಾಏಕಿಯಾಗಿ ನಿರ್ವಾಹಕ ಲಾರಿಯಿಂದ ಜಿಗಿದು ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮೃತದೇಹವನ್ನು ಪುತ್ತೂರಿನ ಶವಗಾರಕ್ಕೆ ಕೊಂಡೊಯ್ಯಲಾಗಿದೆ. ಘಟನಾ ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Related posts

ನಿಯಮ ಮೀರಿ ಸರಕಾರಿ ಜಮೀನಿನಲ್ಲಿ ಕಾಮಗಾರಿ : ತಹಶೀಲ್ದಾರ್‌ರಿಂದ ತಡೆ

ಬಾಲಕ ನಾಪತ್ತೆ ಪ್ರಕರಣ – ಶನಿವಾರ ಫರಂಗಿಪೇಟೆ ಬಂದ್‌ಗೆ ಕರೆ…

ವಾಮಾಚಾರ ಪ್ರಕರಣ – ಪ್ರಸಾದ್ ಅತ್ತಾವರ, ಆತನ ಪತ್ನಿ ತನಿಖೆಗೆ ಸಹಕರಿಸುತ್ತಿಲ್ಲ : ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್‌