ಶ್ರೀಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ

ಉಡುಪಿ : ಜನರಲ್ಲಿ ಸ್ವಚ್ಛತೆಯ ಕುರಿತಂತೆ ಅರಿವು ಹಾಗೂ ಜಾಗೃತಿ ಮೂಡಿಸುವ ಸಲುವಾಗಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಸೂಚನೆಯಂತೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಾಡಿನ ಜನರ ಸಹಭಾಗಿತ್ವದಲ್ಲಿ ರಾಜ್ಯಾದ್ಯಂತ ಶ್ರದ್ಧಾಕೇಂದ್ರಗಳ ಬೃಹತ್ ಸ್ವಚ್ಛತಾ ಅಭಿಯಾನವನ್ನು ಕೈಗೊಂಡಿದೆ.

ಈ ಅಭಿಯಾನದಲ್ಲಿ ಜನರೇ ಸ್ವಯಂ ಪ್ರೇರಣೆಯಿಂದ ಸ್ವಯಂ ಸೇವಕರಾಗಿ ಪಾಲ್ಗೊಂಡು ವರ್ಷದಲ್ಲಿ 2 ಬಾರಿ ಅಂದರೆ ದೇಶದ ಸ್ವಾತಂತ್ರೋತ್ಸವ ಮತ್ತು ಮಕರ ಸಂಕ್ರಾತಿಯ ಸಂದರ್ಭ ಸಪ್ತಾಹದ ಮೂಲಕ ಶ್ರದ್ದಾಕೇಂದ್ರಗಳಾದ ದೇವಸ್ಥಾನ, ಬಸದಿ, ಮಸೀದಿ, ಚರ್ಚ್‌ಗಳ ಸ್ವಚ್ಛತೆಯನ್ನು ಕೈಗೊಳ್ಳುವ ಮೂಲಕ ಸ್ವಚ್ಛತಾ ಸಂದೇಶವನ್ನು ಸಾರಲಿದ್ದಾರೆ.

ಕಳೆದ 8 ವರ್ಷಗಳಿಂದ ಸತತವಾಗಿ ಸ್ವ-ಸಹಾಯ ಸಂಘಗಳ ಸದಸ್ಯರು ಶ್ರದ್ಧಾಕೇಂದ್ರಗಳ ಸ್ವಚ್ಛತೆಯನ್ನು ಕೈಗೊಳ್ಳುತ್ತಿದ್ದು, ಬರುವ ಸ್ವಾತಂತ್ರೋತ್ಸವ ಪೂರ್ವ ಆಗಸ್ಟ್ 8ರಿಂದ 14ರವರೆಗೆ ಶ್ರದ್ಧಾಕೇಂದ್ರಗಳ ಸ್ವಚ್ಚತಾ ಸಪ್ತಾಹವನ್ನು ನಡೆಸಲಿದ್ದಾರೆ.

ಇದಕ್ಕಾಗಿ ಈ ಬಾರಿ ರಾಜ್ಯದಾದ್ಯಂತ 16797 ಶ್ರದ್ಧಾಕೇಂದ್ರಗಳನ್ನು ಗುರುತಿಸಲಾಗಿದ್ದು, ಸುಮಾರು 3,95,724 ಸ್ವಯಂ ಸೇವಕರು, ದೇವಾಲಯ ಆಡಳಿತ ಮಂಡಳಿ, ಒಕ್ಕೂಟದ ಪದಾಧಿಕಾರಿಗಳು, ಜನಜಾಗೃತಿ ಸದಸ್ಯರು, ನವಜೀವನ ಸಮಿತಿಯ ಸದಸ್ಯರು, ಶೌರ್ಯ ವಿಪತ್ತು ನಿರ್ವಹಣೆಯ ಸದಸ್ಯರು, ಸ್ವಚ್ಛತಾ ಸೇನಾನಿಗಳು, ಊರಿನ ಗಣ್ಯರು, ಗ್ರಾಮ ಪಂಚಾಯತ್‌ನ ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಕಾರ್ಯಕರ್ತರು ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

Related posts

ಸಿಬ್ಬಂದಿಗಳಿಗೆ ಝೂನೋಟಿಕ್ ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕುರಿತ ತರಬೇತಿ ಸಾಧನಗಳನ್ನು ಪ್ರಾರಂಭಿಸಿದ ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್

ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಪ್ರತಿಭಾವಂತ ವಿದ್ಯಾರ್ಥಿ ದೀಪೇಶ್ ದೀಪಕ್ ಶೆಣೈ ದ್ವಿತೀಯ

ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣ – ತಮ್ಮ ವಕಾಲತ್ತನ್ನು ವಾಪಾಸು ಪಡೆದ ಆರೋಪಿ ಪ್ರವೀಣ್ ಚೌಗುಲೆ ಪರ ವಕೀಲರು