ವಿದ್ಯಾರ್ಥಿಗಳಿಗೆ ಮಾರಾಟ ಮಾಡಲು ಗಾಂಜಾ ಸಂಗ್ರಹ – ಕೇರಳ ವಿದ್ಯಾರ್ಥಿ ಪೊಲೀಸ್ ವಶಕ್ಕೆ

ಮಣಿಪಾಲ : ಉಡುಪಿ ತಾಲೂಕಿನ ಹೆರ್ಗ ಗ್ರಾಮದ ಅಪಾರ್ಟ್ಮೆಂಟ್‌ನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಅಪಾರ್ಟ್‌ಮೆಂಟ್‌ ರೂಮ್‌ ಮೇಲೆ ದಾಳಿ ಮಾಡಿ, ರೂಮ್‌ನಲ್ಲಿದ್ದ ಕೇರಳ ತಿರುವನಂತಪುರದ ಸಿದ್ದಾರ್ಥ್‌ (22) ಎಂಬಾತನನ್ನು ವಶಕ್ಕೆ ಪಡೆದು ಆತನಿಂದ 20,000 ರೂ. ಮೌಲ್ಯದ ಸುಮಾರು 388 ಗ್ರಾಂ ಗಾಂಜಾ ಹಾಗೂ 45,000 ರೂ. ಮೌಲ್ಯದ ಮೊಬೈಲ್‌ ಫೋನ್‌ನ್ನು ಜಪ್ತಿ ಮಾಡಲಾಗಿದೆ. ಮಣಿಪಾಲದಲ್ಲಿ ವಿದ್ಯಾರ್ಥಿಗಳಿಗೆ ಮಾರಾಟ ಮಾಡಿ ಲಾಭಗಳಿಸುವ ಉದ್ದೇಶದಿಂದ ಈ ಗಾಂಜಾವನ್ನು ವಿದ್ಯಾರ್ಥಿ ಶೇಖರಿಸಿಟ್ಟಿರುವುದು ತನಿಖೆಯಿಂದ ಕಂಡು ಬಂದಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 134/2024 ಕಲಂ: 20(ಬಿ) NDPS Actರಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪ್ರಕರಣ ತನಿಖೆಯಲ್ಲಿರುತ್ತದೆ.

ಮಣಿಪಾಲ ಠಾಣೆ ಪೊಲೀಸ್‌ ನಿರೀಕ್ಷಕರಾದ ದೇವರಾಜ್‌ ಟಿ.ವಿ ರವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಯಿತು.

Related posts

ಸಿಬ್ಬಂದಿಗಳಿಗೆ ಝೂನೋಟಿಕ್ ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕುರಿತ ತರಬೇತಿ ಸಾಧನಗಳನ್ನು ಪ್ರಾರಂಭಿಸಿದ ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್

ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಪ್ರತಿಭಾವಂತ ವಿದ್ಯಾರ್ಥಿ ದೀಪೇಶ್ ದೀಪಕ್ ಶೆಣೈ ದ್ವಿತೀಯ

ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣ – ತಮ್ಮ ವಕಾಲತ್ತನ್ನು ವಾಪಾಸು ಪಡೆದ ಆರೋಪಿ ಪ್ರವೀಣ್ ಚೌಗುಲೆ ಪರ ವಕೀಲರು