ಕಾಲೇಜು ವಿದ್ಯಾರ್ಥಿನಿ ಮೃತ್ಯು

ಉಡುಪಿ : ಉಡುಪಿ ತಾಲೂಕಿನ ಪೆರ್ಡೂರು ಗ್ರಾಮದ ಹತ್ತಬೈಲು ದರ್ಖಾಸಿನ ಲತಾ ಮೊಗವೀರ ಅವರ ಪುತ್ರಿ ರಕ್ಷಿತಾ (21) ಅನಾರೋಗ್ಯದಿಂದ ಸೋಮವಾರ ನಿಧನ ಹೊಂದಿದರು.

ಮಣಿಪಾಲ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.

ಅವರು ಹಿರಿಯಡಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದ್ವಿತೀಯ ಕಲಾ ವಿಭಾಗದಲ್ಲಿ ಓದುತ್ತಿದ್ದರು. ಪೆರಂಪಳ್ಳಿಯಲ್ಲಿ ಎನ್.ಎಸ್.ಎಸ್.ಕ್ಯಾಂಪ್‌‌ನಲ್ಲಿ ಇದ್ದಾಗ ತಲೆಯ ನರದ ರಕ್ತಸ್ರಾವದಿಂದಾಗಿ ಅನಾರೋಗ್ಯಕ್ಕೆ ತುತ್ತಾಗಿದ್ದರು.

Related posts

ಸಿಪಿಎಂ ಕಾರ್ಯದರ್ಶಿ ಮೇಲೆ ದುರುದ್ದೇಶಪೂರಿತ ಎಫ್ಐಆರ್ – ಖಂಡನೆ

ವರ್ಗಾವಣೆಗೊಳ್ಳುತ್ತಿರುವ ನ್ಯಾಯಾಧೀಶರುಗಳಿಗೆ ವಕೀಲರ ಸಂಘದಿಂದ ಬೀಳ್ಕೊಡುಗೆ

ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿ, ಸಿಬಂದಿ ಕನ್ನಡದಲ್ಲೇ ವ್ಯವಹರಿಸುವ ಕಾನೂನು ಅಗತ್ಯ – ಸಚಿವರಿಗೆ ಸಂಸದ ಕೋಟ ಪತ್ರ