ಕಾಲೇಜು ವಿದ್ಯಾರ್ಥಿಗಳಿಂದ ನಡುರಸ್ತೆಯಲ್ಲೇ ಹೊಡೆದಾಟ – ವೀಡಿಯೋ ವೈರಲ್

ಮಂಗಳೂರು : ವಿದ್ಯಾರ್ಥಿಗಳ ಗುಂಪೊಂದು ನಡುರಸ್ತೆಯಲ್ಲಿಯೇ ಪರಸ್ಪರ ಹೊಡೆದಾಡಿಕೊಂಡ ಘಟನೆ ಮಂಗಳೂರಿನ ಪ್ರತಿಷ್ಠಿತ ಅಲೋಶಿಯಸ್ ಕಾಲೇಜು ಬಳಿ ನಡೆದಿದೆ.

ಕಾಲೇಜು ಗೇಟ್ ಮುಂಭಾಗದ ರಸ್ತೆಯಲ್ಲಿ ಎರಡು ಪ್ರತ್ಯೇಕ ಬಣ್ಣದ ಯುನಿಫಾರಂ ಧರಿಸಿರುವ ವಿದ್ಯಾರ್ಥಿಗಳ ಗುಂಪಿನ ನಡುವೆ ಹೊಡೆದಾಟ ನಡೆದಿದೆ. ಕಾಲೇಜು ಬಿಟ್ಟ ಬಳಿಕ ಕ್ಷುಲ್ಲಕ ಕಾರಣಕ್ಕಾಗಿ ವಿದ್ಯಾರ್ಥಿಗಳ ಗುಂಪಿನ ನಡುವೆ ಹೊಡೆದಾಟ ನಡೆದಿದೆ ಎನ್ನಲಾಗಿದೆ. ಆದರೆ ವಿದ್ಯಾರ್ಥಿಗಳ ನಡುವೆ ಹಿಗ್ಗಾಮುಗ್ಗಾವಾಗಿ ಹಲ್ಲೆ ನಡೆಯುತ್ತಿರುವುದು ವೀಡಿಯೋದಲ್ಲಿ ದಾಖಲಾಗಿದೆ. ಹೊಡೆದಾಟದ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗುತ್ತಿದೆ.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಪ್ರಥಮ ಬಾರಿಗೆ ಯಕ್ಷ ರಂಗದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ

ನಾಪತ್ತೆಯಾಗಿರುವ ಮೀನುಗಾರನ ಕುಟುಂಬಕ್ಕೆ ಪರಿಹಾರ ಒದಗಿಸಲು ಗಂಟಿಹೊಳೆ ಆಗ್ರಹ