ಕಾಮನ್ ವೆಲ್ತ್ ಪವರ್ ಲಿಪ್ಟಿಂಗ್ ಚಾಂಪಿಯನ್‌ಶಿಪ್ – ಬೆಂಚ್ ಪ್ರೆಸ್ಸಲ್ಲಿ ಪ್ರದೀಪ್ ಆಚಾರ್ಯಗೆ ಚಿನ್ನ

ಮಂಗಳೂರು : ಸೌತ್ ಆಫ್ರಿಕಾದ ಸನ್ ಸಿಟಿಯಲ್ಲಿ ನಡೆದ ಕಾಮನ್ವೆಲ್ತ್ ಪವರ್ ಲಿಫ್ಟಿಂಗ್ ಚಾಂಪಿಯನ್ಶಿಪ್ 2024‌ರ ಬೆಂಚ್ ಪ್ರೆಸ್ ಸ್ಪರ್ಧೆಯಲ್ಲಿ ಮಂಗಳೂರಿನ ಪ್ರದೀಪ್ ಕುಮಾರ್ ಆಚಾರ್ಯ 237.50 ಕಿಲೊ ಭಾರ ಎತ್ತುವ ಮೂಲಕ ಚಿನ್ನದ ಪದಕ ಗಳಿಸಿದ್ದಾರೆ‌.

ನ್ಯೂ ಸೌತ್ ವೇಲ್ಸ್‌ನ ಥಾಮಸ್, ಇಂಗ್ಲೆಂಡ್‌ನ ಟೇಲರ್ ಕ್ರಮವಾಗಿ ಬೆಳ್ಳಿ, ಕಂಚಿನ ಪದಕ ಗೆದ್ದುಕೊಂಡರು.

ಪ್ರದೀಪ್ ಕುಮಾರ್ ಅವರು ಮಂಗಳೂರಿನ ಬಾಲಾಂಜನೇಯ ಜಿಮ್ನಾಸಿಯಂ‌ನ ಸದಸ್ಯ. ಸತೀಶ್ ಕುಮಾರ್ ಕುದ್ರೋಳಿ ಅವರಿಂದ ಮಾರ್ಗದರ್ಶನ ಪಡೆಯುತ್ತಿದ್ದಾರೆ.

ಮಂಗಳೂರಿನ ಕಷಾರ್ಪ್ ಫಿಟ್ನೆಸ್ ಸಂಸ್ಥೆಯ‌ಲ್ಲಿ ಜನರಲ್ ಮ್ಯಾನೇಜರ್ ಕೆಲಸ ಮಾಡುತ್ತಿದ್ದಾರೆ.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಪ್ರಥಮ ಬಾರಿಗೆ ಯಕ್ಷ ರಂಗದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ

ತಾಯಿ ಹಾಗೂ ಇಬ್ಬರು ಮಕ್ಕಳು ನಾಪತ್ತೆ