ಸಂಪೂರ್ಣ ಹದಗೆಟ್ಟ ರಾಷ್ಟೀಯ ಹೆದ್ದಾರಿ ಮಣಿಪಾಲ ಕೆಳ ಪರ್ಕಳ ರಸ್ತೆ : ಶಾಸಕ ಯಶ್‌ಪಾಲ್ ಸುವರ್ಣ ಪರಿಶೀಲನೆ

ಉಡುಪಿ : ರಾಷ್ಟೀಯ ಹೆದ್ದಾರಿ 169‌A ಮಣಿಪಾಲ ಕೆಳ ಪರ್ಕಳ ಭಾಗದಲ್ಲಿ ನ್ಯಾಯಾಲಯದ ತಡೆಯಾಜ್ಞೆಯಿಂದ ರಾಷ್ಟೀಯ ಹೆದ್ದಾರಿ ಕಾಮಗಾರಿ ಬಾಕಿ ಇರುವ ಸ್ಥಳದಲ್ಲಿ ರಸ್ತೆ ಸಂಪೂರ್ಣ ಹದಗೆಟ್ಟು ದಿನನಿತ್ಯ ಅಪಘಾತಗಳು ನಡೆಯುತ್ತಿರುವ ಹಿನ್ನಲೆ ಉಡುಪಿ ಶಾಸಕರಾದ ಶ್ರೀ ಯಶ್‌ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಗರಸಭೆ ಅಧಿಕಾರಿಗಳಿಗೆ ತಕ್ಷಣ ತುರ್ತು ಕಾಮಗಾರಿ ನಡೆಸಿ ಸುಗಮ ಸಂಚಾರಕ್ಕೆ ಕ್ರಮ ವಹಿಸುವಂತೆ ಶಾಸಕರು ಸೂಚನೆ ನೀಡಿದ ಹಿನ್ನೆಲೆಯಲ್ಲಿ ನಗರಸಭೆ ವತಿಯಿಂದ ಕಾಂಕ್ರೀಟ್ ಹಾಕಿ ಗುಂಡಿ ಮುಚ್ಚುವ ಕಾರ್ಯ ಆರಂಭಿಸಿದ್ದಾರೆ.

ಈ ಸಂದರ್ಭದಲ್ಲಿ ಉಡುಪಿ ನಗರಸಭೆಯ ನಿಕಟಪೂರ್ವ ಅಧ್ಯಕ್ಷರಾದ ಶ್ರೀಮತಿ ಸುಮಿತ್ರಾ ನಾಯಕ್ ಹಾಗೂ ನಗರ ಸಭೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ