ಕಂಪೌಂಡ್ ಕುಸಿದು ಮನೆಗೆ ಹಾನಿ – ಮಣ್ಣಿನಡಿ ಸಿಲುಕಿದ ಮಕ್ಕಳು; ಮದನಿನಗರ ದುರಂತದ ಬೆನ್ನಲ್ಲೇ ಮತ್ತೊಂದು ಘಟನೆ

ಪುತ್ತೂರು : ದ.ಕ.ಜಿಲ್ಲೆಯ ಕುತ್ತಾರು ಮದನಿನಗರದಲ್ಲಿ ನಿನ್ನೆ ಕಂಪೌಂಡ್ ಕುಸಿದು ಮನೆಯ ಮೇಲೆಯೇ ಬಿದ್ದು ನಾಲ್ವರು ಮೃತಪಟ್ಟ ಘಟನೆಯ ನೆನಪು ಮರೆಯುವ ಮುನ್ನವೇ ಪುತ್ತೂರಿನಲ್ಲಿ ಮನೆ ಮೇಲೆಯೇ ತಡೆಗೋಡೆ ಕುಸಿದು ಇಬ್ಬರು ಮಕ್ಕಳು ಮಣ್ಣಿನಡಿ ಸಿಲುಕಿರುವ ಘಟನೆ ನಡೆದಿದೆ.

ಪುತ್ತೂರಿನ ಬನ್ನೂರು ಸಮೀಪದ ಜೈನರಗುರಿ ಎಂಬಲ್ಲಿನ ಮಜೀದ್ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದೆ. ಜೂನ್ 27ರ ನಸುಕಿನ ಜಾವ ನಿದ್ದೆಯಲ್ಲಿದ್ದ ಸಂದರ್ಭ ಮನೆಯ ಮೇಲೆ ತಡೆಗೋಡೆ ಕುಸಿದು ಬಿದ್ದಿದೆ. ತಡೆಗೋಡೆ ಕುಸಿದ ಪರಿಣಾಮ ಮನೆಯ ಅರ್ಧಭಾಗ ಕುಸಿದು ಮಜೀದ್ ಹಾಗೂ ಇಬ್ಬರು ಮಲಗಿದ್ದ ಕೊಠಡಿ ಮೇಲೆಯೇ ಬಿದ್ದಿದೆ.

ತಕ್ಷಣ ಎಚ್ಚೆತ್ತ ಮಜೀದ್ ಅವರು ಮಣ್ಣಿನಡಿ ಸಿಲುಕಿದ್ದ ಮಕ್ಕಳಿಬ್ಬರನ್ನು ಪಾರು ಮಾಡಿದ್ದಾರೆ‌. ಆದ್ದರಿಂದ ಬಹುದೊಡ್ಡ ದುರಂತವೊಂದು ತಪ್ಪಿದಂತಾಗಿದೆ. ಘಟನಾ ಸ್ಥಳಕ್ಕೆ ನಗರಸಭಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಗರಸಭೆ ಮತ್ತು ಸ್ಥಳೀಯರಿಂದ ಮಣ್ಣು ತೆರವು ಕಾರ್ಯಾಚರಣೆ ನಡೆದಿದೆ.

Related posts

ಮಾ.31ರಂದು ಬಜೆಟ್‌ನಲ್ಲಿ ಉಡುಪಿ ಜಿಲ್ಲೆಗೆ ಮಲತಾಯಿ ಧೋರಣೆ ತೋರಿದ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ

ವಿಶ್ವದ ವೇಗದ ಭಗವದ್ಗೀತಾ ಲೇಖಕ : ಕೇವಲ 5.30 ಗಂಟೆಗಳಲ್ಲಿ 18 ಅಧ್ಯಾಯ ಮತ್ತು 700 ಶ್ಲೋಕಗಳ ಬರಹ ಪೂರ್ಣಗೊಳಿಸಿದ ಅದ್ಭುತ ಸಾಧನೆ!

Worlds Fastest Bhagvad Gita Writer Completing 18 Chapters & 700 Verses in Just 5.30 Hours