ಬಸ್‌ನಲ್ಲಿ ಕರ್ತವ್ಯದಲ್ಲಿದ್ದಾಗಲೇ ಎದೆನೋವು ಕಾಣಿಸಿಕೊಂಡು ಕಂಡಕ್ಟರ್ ಮೃತ್ಯು

ಸುಳ್ಯ : ಖಾಸಗಿ ಬಸ್ಸೊಂದರ ಕಂಡಕ್ಟರ್ ಕರ್ತವ್ಯ ನಿರ್ವಹಿಸುತ್ತಿದ್ದಾಗಲೇ ಎದೆನೋವು ಕಾಣಿಸಿಕೊಂಡು ಮೃತಪಟ್ಟ ಘಟನೆ ಸೋಮವಾರ ಸುಳ್ಯದ ತೊಡಿಕಾನದಲ್ಲಿ ನಡೆದಿದೆ.
ಗುರುಪ್ರಸಾದ್ ಕುಂಚಡ್ಕ(30) ಮೃತಪಟ್ಟ ದುರ್ದೈವಿ.

ಗುರುಪ್ರಸಾದ್ ತೊಡಿಕಾನದ ಅವಿನಾಶ್ ಬಸ್‌ನಲ್ಲಿ ಕರ್ತವ್ಯದಲ್ಲಿದ್ದಾಗಲೇ ಏಕಾಏಕಿ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ರಿಕ್ಷಾದಲ್ಲಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆಯೇ ಅವರು ಅರಂಬೂರು ಬಳಿ ಆಟೋ ರಿಕ್ಷಾದಲ್ಲೇ ಪ್ರಾಣ ಬಿಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಮೃತರು ಪತ್ನಿ, ಮೂರು ವರ್ಷದ ಮಗು ಹಾಗೂ ತಾಯಿಯನ್ನು ಅಗಲಿದ್ದಾರೆ.

Related posts

ಉಡುಪಿ ಜಿಲ್ಲೆಯಲ್ಲಿ ಉಪವಾಸ, ಧ್ಯಾನದೊಂದಿಗೆ ಗುಡ್ ಫ್ರೈಡೆ ಆಚರಣೆ

ನೇತ್ರಾವತಿ ಹೋರಾಟಕ್ಕೆ ಸಜ್ಜು – ತೋನ್ಸೆ ಜಯಕೃಷ್ಣ ಶೆಟ್ಟಿ

ಬಪ್ಪನಾಡು ಶ್ರೀದುರ್ಗಾಪರಮೇಶ್ವರಿ ದೇವಿಗೆ ಭಕ್ತರಿಂದ 1.5 ಲಕ್ಷ ಚೆಂಡು ಮಲ್ಲಿಗೆ ಸಮರ್ಪಣೆ