ಸೆ.27-28ರಂದು ಎಜೆ ಆಸ್ಪತ್ರೆಯಲ್ಲಿ “ಕಾನ್ಫ್ಲುಯೆನ್ಸ್-2024“

ಮಂಗಳೂರು : “ಎಜೆ ಆಸ್ಪತ್ರೆಯ ಲಕ್ಷ್ಮಿ ಮೆಮೋರಿಯಲ್ ಕಾಲೇಜ್ ಆಫ್ ಪಿಸಿಯೋಥೆರಪಿ ಇದರ ವತಿಯಿಂದ ನ್ಯಾಷನಲ್ ಪಿಸಿಯೋಥೆರಪಿ ಕಾನ್ಫರೆನ್ಸ್ ಕಾನ್ಫ್ಲುಯೆನ್ಸ್-2024 ಅನ್ನು ಸೆ.27 ಮತ್ತು 28ರಂದು ಹಮ್ಮಿಕೊಳ್ಳಲಾಗಿದೆ“ ಎಂದು ಕಾರ್ಯಕ್ರಮ ಸಂಘಟಕ ಡಾ.ಅಭಿಲಾಷ್ ಪಿ.ವಿ. ಅವರು ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.

“ತೆಲಂಗಾಣ ಕೈಗಾರಿಕಾ ಹಾಗೂ ವಾಣಿಜ್ಯ ಸಚಿವ ಡಿ.ಶ್ರೀಧರ್ ಬಾಬು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಿದ್ದಾರೆ. ರಾಜ್ಯ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್, ಡಾ.ಯು.ಟಿ. ಇಫ್ತಿಕರ್ ಅಲಿ, ಡಾ.ವಿಶಾಲ್ ರಾವ್ ಮತ್ತಿತರ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಸಮಾರೋಪ ಸಮಾರಂಭದಲ್ಲಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರು ಪಾಲ್ಗೊಳ್ಳಲಿದ್ದಾರೆ. ಲಕ್ಷ್ಮಿ ಮೆಮೋರಿಯಲ್ ಎಜುಕೇಷನ್ ಟ್ರಸ್ಟ್ ಅಧ್ಯಕ್ಷ ಡಾ.ಎ.ಜೆ. ಶೆಟ್ಟಿ ಎರಡೂ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ” ಎಂದರು.

ಡಾ.ವೈಶಾಲಿ ಮಾತಾಡಿ, “ಎರಡು ದಿನಗಳ ಕಾಲ ಕಾರ್ಯಕ್ರಮ ನಡೆಯಲಿದ್ದು ದೇಶ ವಿದೇಶಗಳ ಸಂಪನ್ಮೂಲ ವ್ಯಕ್ತಿಗಳು ಕಾರ್ಯಕ್ರಮದಲ್ಲಿ ಮಾಹಿತಿ ವಿನಿಮಯ ಮಾಡಿಕೊಳ್ಳಲಿದ್ದಾರೆ. 27ರಂದು ಸಂಜೆ ಸಾಂಸ್ಕೃತಿಕ ಸ್ಪರ್ಧೆ ಜರುಗಲಿದ್ದು, 28ರಂದು ಸಂಜೆ ಮುರಳಿ ಕೃಷ್ಣ ಮತ್ತು ತಂಡದಿಂದ ಸಂಗೀತ ಕಾರ್ಯಕ್ರಮ ಜರುಗಲಿದೆ” ಎಂದು ಹೇಳಿದರು.

ಪತ್ರಿಕಾಗೋಷ್ಟಿಯಲ್ಲಿ ಡಾ.ಹರಿಕೃಷ್ಣ, ರೋಷನ್, ಅಮರ್ ಪ್ರಕಾಶ್ ಮತ್ತಿತರರು ಉಪಸ್ಥಿತರಿದ್ದರು.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಮಂಗಳೂರು ವಿವಿಯಿಂದ ಯಕ್ಷ ಮಂಗಳ ಪ್ರಶಸ್ತಿ ಪ್ರದಾನ

National Fame Award of India Books of Award – Sushanth Brahmavar