ಕಾಂಗ್ರೆಸ್ ನಾಯಕ, ಧಾರ್ಮಿಕ ಮುಂದಾಳು ಡಿ.ಆರ್.‌ ರಾಜು ನಿಧನ

ಕಾರ್ಕಳ : ಕಾರ್ಕಳ‌ ಬಿಲ್ಲವ ಸಂಘದ ಅಧ್ಯಕ್ಷ, ಕಾಂಗ್ರೆಸ್ ಪಕ್ಷದ ರಾಜ್ಯ ಹಿಂದುಳಿದ ವರ್ಗಗಳ‌ ಘಟಕದ ‌ಉಪಾಧ್ಯಕ್ಷ ಡಿ.ಆರ್.‌ರಾಜು‌(64) ಹೃದಯಘಾತದಿಂದ ರವಿವಾರ ರಾತ್ರಿ ನಿಧನ ಹೊಂದಿದರು.

ಧಾರ್ಮಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಅವರ ನಿಧನಕ್ಕೆ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.

ಅವರ ಅಗಲುವಿಕೆ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ನಷ್ಟವಾಗಿದ್ದು ಡಿ.ಆರ್. ರಾಜು ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬದ ಸದಸ್ಯರಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಶುಭದರಾವ್ ಸಂತಾಪ ಸೂಚಿಸಿದ್ದಾರೆ.

Related posts

ಯುವನಿಧಿಯ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ : ರಮೇಶ್ ಕಾಂಚನ್

ದೆಹಲಿಗೆ ಮಹಿಳಾ ಮುಖ್ಯಮಂತ್ರಿ : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಸಂಭ್ರಮಾಚರಣೆ

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ