ಸೆ 3 ರಂ‌ದು ಸಂಸದ ಸಸಿಕಾಂತ್ ಸೆಂಥಿಲ್ ಜೊತೆಗೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಂವಾದ

ಮಂಗಳೂರು : ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಮಂಗಳೂರು ನಗರ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ದ.ಕ.ಜಿಲ್ಲಾಧಿಕಾರಿ, ತಮಿಳುನಾಡಿನ ತಿರುವಲ್ಲೂರು ಕ್ಷೇತ್ರದ ಸಂಸದರಾದ ಸನ್ಮಾನ್ಯ ಸಸಿಕಾಂತ್ ಸೆಂಥಿಲ್ ಅವರ ಜೊತೆ ಸೆ.3 ಅಪರಾಹ್ನ 3:30 ಗಂಟೆಗೆ ನಗರದ ಬೆಂದೂರುನಲ್ಲಿರುವ ಸಂತ ಸೆಬೆಸ್ಟಿಯನ್ ಜ್ಯುಬಿಲಿ ಹಾಲ್‌ನ‌ಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿದೆ.

ಇದಕ್ಕೂ ಮುನ್ನ ಅವರು ಅಪರಾಹ್ನ 3:00 ಗಂಟೆಗೆ ಕದ್ರಿ-ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಭವನಕ್ಕೆ ಭೇಟಿ ನೀಡಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಕೆ. ಹರೀಶ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ