ಉಡುಪಿ : ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಇವತ್ತು ಉಡುಪಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ವಿಧಾನ ಪರಿಷತ್ ಸದಸ್ಯ ಸಿಟಿ ರವಿ ವಿರುದ್ಧ ಪ್ರತಿಭಟನೆ ನಡೆಯಿತು.
ನಗರದ ಬ್ರಹ್ಮಗಿರಿ ಸರ್ಕಲ್‌ನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು ಅಂಬೇಡ್ಕರ್ ಅವರ ಭಾವಚಿತ್ರ ಪ್ರದರ್ಶನ ಮಾಡಿ ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಮುಖಂಡರು, ಕೇಂದ್ರ ಸಚಿವ ಅಮಿತ್ ಶಾ ಅವರು ಅಂಬೇಡ್ಕರ್ ಅವರನ್ನು ಅವಹೇಳನ ಮಾಡಿದ್ದು ಬಿಜೆಪಿಯ ನಿಜ ಮುಖ ಇದರಿಂದ ಬಯಲಾಗಿದೆ. ಅಮಿತ್ ಶಾ ಅವರನ್ನು ಮಂತ್ರಿ ಮಂಡಲದಿಂದ ವಜಾ ಮಾಡಬೇಕು. ವಿಧಾನ ಪರಿಷತ್‌ನಲ್ಲಿ ಮಹಿಳಾ ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಸಿಟಿ ರವಿ ಬಳಸಿದ ಪದಪ್ರಯೋಗ ಬಿಜೆಪಿಯ ಸಂಸ್ಕೃತಿಯನ್ನು ತೋರಿಸುತ್ತದೆ. ಸಿಟಿ ರವಿ ಅವರನ್ನು ಕೇವಲ ಬಂಧಿಸಿದರೆ ಸಾಲದು, ಅವರ ವಿಧಾನ ಪರಿಷತ್ ಸದಸ್ಯತ್ವವನ್ನು ತಕ್ಷಣ ರದ್ದು ಮಾಡಬೇಕು. ಅವರಿಗೆ ಉಗ್ರ ಶಿಕ್ಷೆ ನೀಡಬೇಕು ಎಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಆಗ್ರಹಿಸಿದರು.
ಬ್ರಹ್ಮಗಿರಿ ಸರ್ಕಲ್‌ನಲ್ಲಿ ಪ್ರತಿಭಟನೆ ಸಂದರ್ಭ ಸಿ.ಟಿ. ರವಿಗೆ ಕೈ ಕಾರ್ಯಕರ್ತರು ಧಿಕ್ಕಾರ ಕೂಗಿದರು.