ಪರಶುರಾಮ ಥೀಮ್ ಪಾರ್ಕ್ ಹಗರಣದ ವಿರುದ್ಧ ಜುಲೈ 23ರಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ

ಕಾರ್ಕಳ ತಾಲೂಕಿನ ಬೈಲೂರು ಎರ್ಲಪಾಡಿ ಉಮ್ಮಿಕಲ್ ಬೆಟ್ಟದ ಪರಶುರಾಮ ಥೀಮ್ ಪಾರ್ಕ್ ಹಾಗೂ ಕಂಚಿನ ಪ್ರತಿಮೆ ನಿರ್ಮಾಣದಲ್ಲಾಗಿರುವ ಹಗರಣದ ವಿರುದ್ಧ ಜುಲೈ 23ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ಬಳಿ ಇರುವ ಮಹಾತ್ಮಾ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ಕಾಂಗ್ರೆಸ್‌ ಬೃಹತ್ ಪ್ರತಿಭಟನೆ ನಡೆಸಲಿದೆ ಎಂದು ಬ್ಲಾಕ್ ಕಾಂಗ್ರೆಸ್ ವಕ್ತಾರ ಶುಭದ ರಾವ್ ತಿಳಿಸಿದ್ದಾರೆ.

ಈ ಪ್ರತಿಭಟನೆಯಲ್ಲಿ ರಾಜ್ಯ ಕಾಂಗ್ರೆಸ್ ಮುಖಂಡರು, ರಾಜ್ಯದ ಎಲ್ಲ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಜಿಲ್ಲೆಯ ಎಲ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ವಿಧಾನಸಭಾ ಚುನಾವಣೆ ಸ್ಪರ್ಧಿಗಳು, ಪದಾಧಿಕಾರಿಗಳು ಹಾಗೂ ಕಾರ್ಕಳ ವಿಧಾನಸಭಾ ಕ್ಷೇತ್ರದ ಎಲ್ಲ ಗ್ರಾಮಗಳಿಂದಲೂ ಕಾರ್ಯಕರ್ತರು ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ