ಮಂಗಳೂರು : ಸಿಎಂ ಸಿದ್ದರಾಮಯ್ಯರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿಸಿದ ರಾಜ್ಯಪಾಲರ ವಿರುದ್ಧ ಖಂಡನೆ ವ್ಯಕ್ತಪಡಿಸಿ ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಇಂದು ಮನಪಾದ ಮುಂಭಾಗ ಪ್ರತಿಭಟನೆ ನಡೆದ ವೇಳೆ ಉದ್ರಿಕ್ತ ಕಾರ್ಯಕರ್ತರು ಬಸ್ಸಿಗೆ ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದೆ.
ಈ ವೇಳೆ ಟಯರ್ ಸುಟ್ಟು ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಪಡಿಸಿಕೊಂಡರು.


ತಕ್ಷಣ ಪೊಲೀಸರು ಟಯರ್ ಮೇಲೆ ನೀರು ಸಿಂಪಡಿಸಿ ಬೆಂಕಿಯನ್ನು ನಂದಿಸಿದ್ದಾರೆ. ಅಲ್ಲದೆ ಪ್ರತಿಭಟನಕಾರರು ಪ್ರತಿಭಟನೆ ನಡೆಯುತ್ತಿದ್ದಲ್ಲಿ ಸಂಚರಿಸುತ್ತಿದ್ದ ಜೋಕಟ್ಟೆಯ ಮೌಲಾ ಎಂಬ ಖಾಸಗಿ ಬಸ್‌ಗೆ ಕಲ್ಲು ತೂರಿ ಆಕ್ರೋಶ ಮುಂಭಾಗದ ಗಾಜನ್ನು ಒಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಬಸ್‌ನಲ್ಲಿ 10 ಮಂದಿ ಪ್ರಯಾಣಿಕರಿದ್ದರು. ನಾಲ್ಕು ಮಂದಿ ಸೇರಿ ಕಲ್ಲು ತೂರಾಟ ನಡೆಸಿದ್ದಾರೆ. ಘಟನೆಯಲ್ಲಿ ಒಬ್ಬ ಪ್ರಯಾಣಿಕೆಯ ಕಣ್ಣಿನ ಬದಿ ಗಾಯವಾಗಿದೆ ಎನ್ನಲಾಗಿದೆ.
ಪ್ರತಿಭಟನೆಗೆ ಮೊದಲು ಮಂಗಳೂರಿನ ಲೇಡಿಹಿಲ್ ಬ್ರಹ್ಮಶ್ರೀ ನಾರಾಯಣಗುರು ವೃತ್ತದಿಂದ ನೂರಾರು ಪ್ರತಿಭಟನಾಕಾರರು ಲಾಲ್‌ಭಾಗ್‌ನ ಮನಪಾ ಕಚೇರಿ ಮುಂಭಾಗದವರೆಗೆ “ಪಾದಯಾತ್ರೆ” ನಡೆಸಿದರು. ಬಳಿಕ ಮನಪಾ ಕಚೇರಿ ಮುಂಭಾಗ ಪ್ರತಿಭಟನೆ ನಡೆದಿದೆ.