ಕಾಂಗ್ರೆಸ್ ಪ್ರತಿಭಟನೆಯಲ್ಲಿ ಬಸ್‌ಗೆ ಕಲ್ಲು ತೂರಾಟ : ದೃಶ್ಯ ವೀಡಿಯೋದಲ್ಲಿ ಸೆರೆ, ಮೂವರು ಅರೆಸ್ಟ್

ಮಂಗಳೂರು: ನಗರದ ಲಾಲ್‌ಬಾಗ್‌ನ ಮನಪಾ ಕಚೇರಿ ಮುಂಭಾಗ ನಡೆದ ಕಾಂಗ್ರೆಸ್ ಪ್ರತಿಭಟನೆ ಸಂದರ್ಭ ಬಸ್‌ಗೆ ಕಲ್ಲು ತೂರಾಟ ನಡೆಸಿ ಗಾಜು ಒಡೆದಿರುವ ಪ್ರಕರಣ ಸೋಮವಾರ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಕರಣ ಸಂಬಂಧ ಬರ್ಕೆ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಸದ್ಯ ಶಾಹುಲ್ ಹಮೀದ್, ಅನ್ವರ್, ಕಿಶೋರ್ ಶೆಟ್ಟಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಸಿಎಂ ಸಿದ್ದರಾಮಯ್ಯರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿಸಿದ ರಾಜ್ಯಪಾಲರ ನಡೆಯನ್ನು ಖಂಡಿಸಿ ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರತಿಭಟನೆ ನಡೆಸಿತ್ತು. ಈ ವೇಳೆ ಜೋಕಟ್ಟೆಗೆ ಹೋಗುವ ಮೌಲಾ ಎಂಬ ಖಾಸಗಿ ಬಸ್ ಅಲ್ಲಿಗೆ ಆಗಮಿಸಿದೆ. ಆಗ ಪ್ರತಿಭಟನಾಕಾರರಲ್ಲಿ ಕೆಲವರು ಪೊಲೀಸರು ಸಮ್ಮುಖದಲ್ಲೇ ಈ ಬಸ್‌ಗೆ ಕಲ್ಲು ತೂರಾಡಿ ಗಾಜು ಒಡೆದಿದ್ದಾರೆ‌. ಬಳಿಕ ಬಸ್ಸಿನ ಮುಂಭಾಗ ಕಾಲಿನಿಂದ ಒದ್ದು ಕಾರ್ಯಕರ್ತರ ಗೂಂಡಾಗಿರಿ ನಡೆಸಿದ್ದಾರೆ. ಈ ದೃಶ್ಯ ಮೊಬೈಲ್ ವೀಡಿಯೋದಲ್ಲಿ ಸೆರೆಯಾಗಿದೆ.

ಈ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ – ಬ್ರಿಟಿಷ್ ಆಡಳಿತವನ್ನೂ ಮೀರಿಸಿದ ಸಿದ್ಧರಾಮಯ್ಯ ಸರ್ಕಾರ : ಯಶ್‌ಪಾಲ್ ಸುವರ್ಣ

ಮಾರಿದ ಹಳೆಯ ಬಸ್ಸನ್ನು ಕದ್ದು ತಂದ ಆರೋಪ – ತಂದೆ ಮಗನ ವಿರುದ್ಧ ದೂರು ದಾಖಲು !