65 ಲಕ್ಷ ರೂಪಾಯಿ ಮೊತ್ತದಲ್ಲಿ ಆರೋಗ್ಯ ಉಪ ಕೇಂದ್ರ ಕಟ್ಟಡ ನಿರ್ಮಾಣಕ್ಕೆ ಚಾಲನೆ

ಕಾಪು : ಕಾಪು ತಾಲೂಕಿನ ಕುತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಡು ಕುತ್ಯಾರು ಮೋರಾರ್ಜಿ ದೇಸಾಯಿ ಶಾಲೆ ಬಳಿ ಉಪ ಆರೋಗ್ಯ ಕೇಂದ್ರ ಕಟ್ಟಡ ನಿರ್ಮಾಣಕ್ಕೆ 65 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದೆ. ಸ್ಥಳೀಯ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಕಾಮಗಾರಿಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಕುತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷರ ಜನಾರ್ಧನ ಆಚಾರ್ಯ, ಉಪಾಧ್ಯಕ್ಷ ಭಾರತಿ, ಕಾಪು ತಾಲೂಕು ವೈದ್ಯಾಧಿಕಾರಿ ವಾಸುದೇವ್ ಉಪಾಧ್ಯಾಯ, ಶಿರ್ವ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಸುಬ್ರಮಣ್ಯ, ಕುತ್ಯಾರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜೇಶ್ ಹಾಗೂ ಕುತ್ಯಾರು ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಪ್ರಮುಖರು, ಸ್ಥಳೀಯರು ಉಪಸ್ಥಿತರಿದ್ದರು.

Related posts

ಮೀನು ಸಾಗಾಟದ ಲಾರಿಗೆ ದುಷ್ಕರ್ಮಿಗಳಿಂದ ಕಲ್ಲು- ದೂರು ದಾಖಲು

ಮೇ 5ರಿಂದ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿಗಳ ಸಮೀಕ್ಷೆ – ಜಿಲ್ಲಾಧಿಕಾರಿ

ಎಸ್‌ಎಸ್‌ಎಲ್‌ಸಿ ಫಲಿತಾಂಶ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಅಗ್ರಸ್ಥಾನ : ಯಶ್‌ಪಾಲ್ ಸುವರ್ಣ ಅಭಿನಂದನೆ