1 ಕೋಟಿ ಅನುದಾನದಲ್ಲಿ ಹಿರಿಯಡಕ ಕರ್ನಾಟಕ ಪಬ್ಲಿಕ್ ಸ್ಕೂಲ್ ನೂತನ ಕಟ್ಟಡ ನಿರ್ಮಾಣ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಶಿಲಾನ್ಯಾಸ

ಕಾಪು : ಕಾಪು ವಿಧಾನಸಭಾ ಕ್ಷೇತ್ರದ ಹಿರಿಯಡಕ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಪದವಿ ಪೂರ್ವ ಕಾಲೇಜಿನ ನೂತನ ಕಟ್ಟಡ ನಿರ್ಮಾಣಕ್ಕೆ ರೂ 1 ಕೋಟಿ ರೂಪಾಯಿ ಅನುದಾನ ಮಂಜೂರಾಗಿದ್ದು, ಇದರ ಶಿಲಾನ್ಯಾಸವನ್ನು ಇಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು.

ಇದೇ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕಾಲೇಜಿಗೆ ಕೊಡಮಾಡಿದ ಪೀಠೋಪಕರಣಗಳನ್ನು ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಂತಿ, ಉಪಾಧ್ಯಕ್ಷರಾದ ಹರೀಶ್ ಸಾಲಿಯಾನ್, ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಬಿ.ಎಲ್. ವಿಶ್ವಾಸ ಭಟ್, ಸದಸ್ಯರಾದ ಅಶೋಕ್ ಜೋಗಿ, ದೇವರಾಜ ಶಾಸ್ತ್ರಿ, ವಿಜೇತ್ ಬೆಳ್ಳರ್ಪಾಡಿ, ಸುಬ್ರಹ್ಮಣ್ಯ ರಾವ್, ವಿಜಯ ಶೆಟ್ಟಿ, ನಿತ್ಯಾನಂದ ನಾಯಕ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕರಾದ ನಾಗರಾಜ ಶೆಟ್ಟಿ, ಉಡುಪಿ ಯೋಜನಾಧಿಕಾರಿಗಳಾದ ರಾಮು ಎಂ, ಹಿರಿಯಡಕ ವಲಯ ಮೇಲ್ವಿಚಾರಕರಾದ ಸಂತೋಷ್, ಹಿರಿಯ ವಲಯ ಅಧ್ಯಕ್ಷರಾದ ಗಣೇಶ್ ನಾಯ್ಕ, ಬೊಮ್ಮರಬೆಟ್ಟು ಒಕ್ಕೂಟದ ಅಧ್ಯಕ್ಷರಾದ ಜಯಲಕ್ಷ್ಮಿ ಹೆಗ್ಡೆ, ಉಡುಪಿ ತಾಲೂಕು ಜನ ಜಾಗೃತಿ ಸಮಿತಿ ಅಧ್ಯಕ್ಷರಾದ ಸತ್ಯಾನಂದ ನಾಯಕ್, ಸದಸ್ಯರಾದ ನಳಿನಾ ಎಂ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಂಶುಪಾಲರಾದ ಮಂಜುನಾಥ್ ಭಟ್ ಉಪಸ್ಥಿತರಿದ್ದರು.

Related posts

ಮಣ್ಣಪಳ್ಳ ಕೆರೆ ಸಮಗ್ರ ಅಭಿವೃದ್ಧಿ ಹಾಗೂ ನಿರ್ವಹಣೆ ನಗರಸಭೆಗೆ ಹಸ್ತಾಂತರಿಸಿ : ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ

ವೈದ್ಯಕೀಯ ಶಿಕ್ಷಣದಲ್ಲಿ ಆಧುನಿಕ VR-ಆಧಾರಿತ ಕೌಶಲ ತರಬೇತಿಗೆ ಮೆಡಿಸಿಮ್ ವಿಆರ್‌ನೊಂದಿಗೆ ಮಾಹೆ ಒಪ್ಪಂದ

ಇಡಿ, ಐಟಿ, ಸಿಬಿಐ ದುರುಪಯೋಗ ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ