ಗಾಂಜಾ ಸೇವನೆ : ಆರೋಪಿ ಸೆರೆ…!

ಮಣಿಪಾಲ : ಮಣಿಪಾಲ ಠಾಣೆ ಪೊಲೀಸ್‌ ಉಪನಿರೀಕ್ಷಕ ಅನಿಲ್ ಕುಮಾರ್ ರೌಂಡ್ಸ್ ಕರ್ತವ್ಯದಲ್ಲಿರುವಾಗ ಡಿ.ಸಿ ಆಫೀಸ್‌ ರೋಡ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸಿದ್ದು ಕಂಡುಬಂದಿದ್ದು ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತ ಆರೋಪಿಗಳನ್ನು ದಿವ್ಯಾಶ್‌ (22) ಎಂದು ಗುರುತಿಸಲಾಗಿದೆ. ಪೊಲೀಸರು ಪರಿಶೀಲನೆ ನಡೆಸಿದಾಗ ಈತ ಗಾಂಜಾ ಅಮಲಿನಲ್ಲಿದ್ದ. ಬಳಿಕ ಮಣಿಪಾಲ ಕೆ ಎಂ ಸಿ ಫೊರೆನ್ಸಿಕ್ ಮೆಡಿಸಿನ್ ವಿಭಾಗದ ವೈದ್ಯರು ವೈದ್ಯಕೀಯ ಪರೀಕ್ಷೆ ನಡೆಸಿದಾಗ ಆರೋಪಿಯು ಮಾದಕ ವಸ್ತು ಗಾಂಜಾ ಸೇವಿಸಿರುವುದು ದೃಢಗೊಂಡಿದೆ. ಈ ಬಗ್ಗೆ ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಆಕಸ್ಮಿಕವಾಗಿ ಬೆಂಕಿ – ಗೋಣಿ ಚೀಲ ಗೋದಾಮು ಸುಟ್ಟು ಭಸ್ಮ…!

ಉಡುಪಿಯಿಂದ ಮಹಾಕುಂಭ ಮೇಳಕ್ಕೆ ರೈಲು – ಸಂಸದ ಕೋಟ ಮನವಿ

ಶಿಕ್ಷಣತಜ್ಞ ಸೀತಾರಾಮ ಶೆಟ್ಟಿ ನಿಧನ