ಬ್ರಹ್ಮಾವರ : ಫೆಂಗಲ್ ಸೈಕ್ಲೋನ್ ನಿನ್ನೆಯಿಂದ ಭಾರೀ ಅನಾಹುತಗಳನ್ನೇ ಸೃಷ್ಟಿಮಾಡಿದೆ. ಸೋಮವಾರ ಸಂಜೆ ಪ್ರಾರಂಭಗೊಂಡ ಮಳೆ ಉಡುಪಿ ಜಿಲ್ಲೆಯಲ್ಲಿ ಈಗಲೂ ಮುಂದುವರೆದಿದೆ.

ನಿನ್ನೆಯ ಅಬ್ಬರದ ಮಳೆಗೆ ಸಿಡಿಲು ಬಡಿದು ಮನೆಗೆ ಹಾನಿಯುಂಟಾದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ನೀಲಾವರ ಸಮೀಪದ ಸೊಣಗಾರ ಬೆಟ್ಟು ಎಂಬಲ್ಲಿ ಸಂಭವಿಸಿದೆ. ಅದೃಷ್ಟವಶಾತ್ ಮನೆಯಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.
ನೀಲಾವರ ಸಮೀಪದ ಸೊಣಗಾರಬೆಟ್ಟು ರಾಧು ಶೆಡ್ತಿಯವರ ಮನೆಗೆ ಸಿಡಿಲು ಬಡಿದು ಮನೆಯ ವಿದ್ಯುತ್ ಉಪಕರಣಗಳಿಗೆ ಹಾನಿಯುಂಟಾಗಿದ್ದು ವಿದ್ಯುತ್ ಉಪಕರಣಗಳು ಸುಟ್ಟು ಕರಕಲಾಗಿವೆ. ಇನ್ನು ರಾತ್ರಿಯಿಂದ ಹಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಿದ್ದು ಜನರು ಪರದಾಡುವಂತಾಗಿದೆ.


