ನಿರಂತರ ಮಾದಕ ವಸ್ತು ಮಾರಾಟ; ಇಬ್ಬರು ಆರೋಪಿಗಳು ಧಾರವಾಡ ಜೈಲಿಗೆ

ಉಡುಪಿ : ಮಾದಕ ವಸ್ತು ಗಾಂಜಾ ವಿರುದ್ಧ ಸಮರ ಸಾರಿರುವ ಜಿಲ್ಲಾ ಪೊಲೀಸರು ಈ ಪಿಡುಗಿನ ವಿರುದ್ಧ ನಿರಂತರ ಕಾರ್ಯಾಚರಣೆ ಕೈಗೊಂಡಿದ್ದಾರೆ.

ಜಿಲ್ಲೆಯಲ್ಲಿ ನಿರಂತರವಾಗಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಜೈಲಿಗೆ ಅಟ್ಟಿದ್ದಾರೆ. ಕೊಳಲಗಿರಿಯ ಕೃಷ್ಣ ಆಚಾರಿ (43) ಹಾಗೂ ಕೆಳಾರ್ಕಳಬೆಟ್ಟುವಿನ ಅಬ್ದುಲ್ ಜಬ್ಬಾರ್ (27) ವಿರುದ್ಧ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಮಾದಕ ವಸ್ತು ಮಾರಾಟದ ಬಗ್ಗೆ ಪ್ರಕರಣಗಳಿವೆ. ಈ ಹಿನ್ನೆಲೆಯಲ್ಲಿ ಇವರಿಬ್ಬರನ್ನು ಎನ್‌ಡಿಪಿಎಸ್ ಕಾಯ್ದೆಯಡಿ ಬಂಧಿಸಿ ಧಾರವಾಡದ ಕೇಂದ್ರ ಕಾರಾಗೃಹಕ್ಕೆ ರವಾನಿಸಲಾಗಿದೆ.

Related posts

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ

ಮೂಡಲಪಾಯ ಯಕ್ಷಗಾನದ ಅಭ್ಯುದಯವನ್ನು ಬೆಂಬಲಿಸಲು ಅಕಾಡೆಮಿ ಬದ್ಧವಾಗಿದೆ : ಡಾ. ತಲ್ಲೂರು

National Fame Award of India Books of Award – Sushanth Brahmavar