ಅಕ್ರಮ ಮರಳುಗಾರಿಕೆಗೆ ಸಹಕಾರ – ಕಾಪು ಎಸ್ಸೈ ಅಮಾನತು

ಕಾಪು : ಅಕ್ರಮ ಮರಳುಗಾರಿಕೆಗೆ ಸಹಕಾರ ಮಾಡಿರುವ ಆರೋಪದಲ್ಲಿ ಕಾಪು ಠಾಣಾಧಿಕಾರಿ ಅಬ್ದುಲ್ ಖಾದರ್ ಅಮಾನತುಗೊಂಡಿದ್ದಾರೆ.

ಕಾಪು ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಮರಳುಗಾರಿಕೆ ಬಗ್ಗೆ ಕಾಪು ಠಾಣೆಯಲ್ಲಿ ದೂರು‌ ದಾಖಲಾಗಿತ್ತು. ನಂತರ ಈ ಪ್ರಕರಣಕ್ಕೆ ಸಂಬಂಧಿಸಿ ಜಿಲ್ಲಾ ಎಸ್ಪಿ ಡಾ.ಅರುಣ್ ಕುಮಾರ್ ಸಿಬ್ಬಂದಿಯನ್ನು ಅಮಾನತುಗೊಳಿಸಿದ್ದರು. ಆದರೆ ಅಕ್ರಮ ಮರಳುಗಾರಿಕೆ ನಡೆಸಲು ಕಾಪು ಠಾಣಾಧಿಕಾರಿಯವರು ಸಹಕರಿಸಿದ್ದಾರೆ ಎಂಬುದನ್ನು ತಿಳಿಸುವ ಆಡಿಯೋವೊಂದು ಎಸ್ಪಿ ಡಾ.ಅರುಣ್ ಅವರಿಗೆ ಲಭಿಸಿದ್ದು, ಈ ಆಡಿಯೋವನ್ನು ಕಾರ್ಕಳ ಡಿವೈಎಸ್ಪಿ ಅರವಿಂದ್ ಕಲ್ಲುಗುಜ್ಜಿಯವರ ಮೂಲಕ ವಿಚಾರಣೆ ನಡೆಸಿದ್ದಾರೆ. ಡಿವೈಎಸ್ಪಿಯವರ ವರದಿಯಲ್ಲಿ ಕಾಪು ಠಾಣಾಧಿಕಾರಿ ವಿರುದ್ದದ ಆರೋಪವು ಮೇಲ್ನೋಟಕ್ಕೆ ಸಾಬೀತಾದ ಹಿನ್ನಲೆಯಲ್ಲಿ ಅಮಾನತುಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾ ಎಸ್ಪಿ ಡಾ.ಅರುಣ್, ಕಾಪು ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಮರಳುಗಾರಿಕೆಯಲ್ಲಿ ಕಾನೂನು ಉಲ್ಲಂಘನೆಯಾಗಿದ್ದು, ಅಧಿಕಾರಿ ಶಾಮೀಲಾಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ – ಬ್ರಿಟಿಷ್ ಆಡಳಿತವನ್ನೂ ಮೀರಿಸಿದ ಸಿದ್ಧರಾಮಯ್ಯ ಸರ್ಕಾರ : ಯಶ್‌ಪಾಲ್ ಸುವರ್ಣ

ಮಾರಿದ ಹಳೆಯ ಬಸ್ಸನ್ನು ಕದ್ದು ತಂದ ಆರೋಪ – ತಂದೆ ಮಗನ ವಿರುದ್ಧ ದೂರು ದಾಖಲು !