ರಾಹುಲ್ ಗಾಂಧಿ ಬಗ್ಗೆ ವಿವಾದಾತ್ಮಕ ಹೇಳಿಕೆ – ಶಾಸಕ ಭರತ್ ಶೆಟ್ಟಿ ಮೇಲೆ ಎಫ್ಐಆರ್‌

ಮಂಗಳೂರು: ಲೋಕಸಭೆಯ ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಶಾಸಕ ಭರತ್ ಶೆಟ್ಟಿ ಮೇಲೆ ಕಾವೂರು ಠಾಣೆಯಲ್ಲಿ ಎಫ್ಐಆರ್‌ ದಾಖಲಾಗಿದೆ.

ಮಂಗಳೂರಿನ ಕಾವೂರಿನಲ್ಲಿ ಸೋಮವಾರ ನಡೆದಿದ್ದ ಬಿಜೆಪಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಶಾಸಕ ಭರತ್ ಶೆಟ್ಟಿ, ರಾಹುಲ್ ಗಾಂಧಿಗೆ ಪಾರ್ಲಿಮೆಂಟ್ ಒಳಗೆ ಹೋಗಿ ಕೆನ್ನೆಗೆ ಬಾರಿಸಬೇಕಿತ್ತು ಅನಿಸುತ್ತಿದೆ. ಅಲ್ಲದೆ ರಾಹುಲ್ ಗಾಂಧಿಯವರು ಶಿವನ ಫೋಟೊ ಹಿಡಿದು ನಿಂತಿದ್ದ. ಈ ಹುಚ್ಚನಿಗೆ ಶಿವ ಮೂರನೇ ಕಣ್ಣು ಬಿಟ್ಟರೆ ಸುಟ್ಟು ಬೂದಿಯಾಗ್ತಾನೆ ಎಂದು ಗೊತ್ತಿಲ್ಲವೆಂದು ಎಂದು ಏಕವಚನದಲ್ಲಿ ಹೇಳಿಕೆ ನೀಡಿದ್ದರು.

ಈ ಹಿನ್ನೆಲೆಯಲ್ಲಿ ಸ್ಥಳೀಯ ಕಾರ್ಪೋರೇಟರ್ ಅನಿಲ್ ಕುಮಾರ್ ನೀಡಿರುವ ದೂರಿನಡಿ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಬಿಎನ್ಎಸ್ 353(3), 353 ಸೆಕ್ಷನ್‌ನಡಿ ಪ್ರಕರಣ ದಾಖಲಿಸಿದ್ದೇವೆ. ಮುಂದಿನ ಕ್ರಮ ಆಗಲಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಹೇಳಿದರು.

Related posts

ನಾಪತ್ತೆಯಾಗಿದ್ದ ವ್ಯಕ್ತಿ‌ ಶವವಾಗಿ ಪತ್ತೆ

ಟೈಮಿಂಗ್‌ ವಿಚಾರದಲ್ಲಿ ಗಲಾಟೆ; ಹೊಡೆದಾಟದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌…!

ಪ್ರಚೋಚನಕಾರಿ ಭಾಷಣ – ಪ್ರಮೋದ್ ಮಧ್ವರಾಜ್ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ