ರಾಜ್ಯಪಾಲರ ವಿರುದ್ದ ವಿವಾದಾತ್ಮಕ ಹೇಳಿಕೆ, ಮಂಗಳೂರಿನಲ್ಲಿ ಕಾಂಗ್ರೆಸ್ ನಾಯಕ ಐವನ್ ಡಿಸೋಜಾರ ಮನೆಗೆ ಕಲ್ಲು ತೂರಾಟ..!

ಮಂಗಳೂರು : ರಾಜ್ಯಪಾಲರ ವಿರುದ್ದ ಕಾಂಗ್ರೆಸ್ ನಾಯಕ ಐವನ್ ಡಿಸೋಜಾ ಅವರ ವಿವಾದಾತ್ಮಕ ಹೇಳಿಕೆ ಸಂಘರ್ಷದ ವಾತಾವರಣ ನಿರ್ಮಾಣ ಮಾಡಿದ್ದು ಮಂಗಳೂರಿನಲ್ಲಿರುವ ಐವನ್ ಡಿಸೋಜ ಅವರ ಮನೆಗೆ ಕಲ್ಲು ತೂರಾಟ ನಡೆಸಲಾಗಿದೆ.

ಬುಧವಾರ ರಾತ್ರಿ ಸುಮಾರು 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು ಈ ಸಂದರ್ಭ ಐವನ್ ಡಿಸೋಜಾ ಅವರು ಮನೆಯಲ್ಲಿರದೆ ಬೆಂಗಳೂರಿನಲ್ಲಿ ಪಕ್ಷದ ಮೀಟಿಂಗ್‌ಗೆ ಹೋಗಿದ್ದರು ಎನ್ನಲಾಗಿದೆ.

ಸುಮಾರು 5 ರಿಂದ ಆರು ಜನರ ತಂಡ ರಾತ್ರಿ 11‌ರ ಸುಮಾರಿಗೆ ನಗರದ ವೇಲೆನ್ಸಿಯದಲ್ಲಿರುವ ಐವನ್ ಡಿಸೋಜಾ ಅವರ ಮನೆಗೆ ಕಲ್ಲು ತೂರಾಟ ನಡೆಸಿ ಘೋಷಣೆಗಳನ್ನು ಕೂಗಿ ಬಳಿಕ ಪರಾರಿಯಾಗಿದೆ ಎನ್ನಲಾಗಿದೆ.

ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಲ್ಲು ತೂರಾಟದಿಂದ ಯಾವುದೇ ಹಾನಿಯಾಗಿಲ್ಲ‌ವೆಂದು ಹೇಳಲಾಗಿದ್ದು ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Related posts

ರಾಜ್ಯ ಗುಪ್ತವಾರ್ತೆ ನಿರ್ದೇಶಕ ಹೇಮಂತ್ ಎಂ ನಿಂಬಾಳ್ಕರ್‌ಗೆ ಮುಖ್ಯಮಂತ್ರಿಗಳ ಸ್ವರ್ಣಪದಕ ಪ್ರದಾನ

ಕೋಳಿ ಅಂಕದ ವಿಚಾರ ಮತ್ತೆ ಮುನ್ನೆಲೆಗೆ; ಉಡುಪಿ ಶಾಸಕರಿಗೆ ಕಾಂಗ್ರೆಸ್ ಟಾಂಗ್!

ಸಾವಿರಾರು ರೂ. ಚಾಕಲೇಟ್ ಕದ್ದೊಯ್ದ ಚಾಕಲೇಟ್ ಕಳ್ಳರ ಕೈಚಳಕ ಸಿಸಿ ಕ್ಯಾಮೆರಾದಲ್ಲಿ ದಾಖಲು!