ಕಂಚಿನಡ್ಕ ಟೋಲ್‌ಗೇಟ್ ಸ್ಥಾಪನೆ ವಿವಾದ – ಪರಿಶೀಲನೆಗೆ ಬಂದಿದ್ದ ಅಧಿಕಾರಿಗಳಿಗೆ ತರಾಟೆ; ವಿರೋಧದಿಂದ ವಾಪಾಸಾದ ಅಧಿಕಾರಿಗಳು

ಪಡುಬಿದ್ರಿ : ಪಡುಬಿದ್ರಿ-ಕಾರ್ಕಳ ರಾಜ್ಯ ಹೆದ್ದಾರಿ ಕಂಚಿನಡ್ಕದಲ್ಲಿ ನಿರ್ಮಿಸಲುದ್ದೇಶಿಸಿರುವ ಟೋಲ್‌ಗೇಟ್ ಪರಿಶೀಲನೆಗೆ ಬಂದಿದ್ದ ಅಧಿಕಾರಿಗಳನ್ನು ಟೋಲ್ ವಿರೋಧಿ ಹೋರಾಟ ಸಮಿತಿಯ ಪ್ರಮುಖರು ತರಾಟೆಗೆ ತೆಗೆದುಕೊಂಡ ಘಟನೆ ಇಂದು ನಡೆದಿದೆ.

ರಾಜ್ಯ ಹೆದ್ದಾರಿಯಲ್ಲಿ ಟೋಲ್ ನಿರ್ಮಾಣದ ಸ್ಥಳ ಪರಿಶೀಲನೆಗಾಗಿ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ ಎಕ್ಸಿಕ್ಯೂಟಿವ್ ಎಂಜಿನಿಯರ್ ರಘು ಎಲ್ ಹಾಗೂ ಸಹಾಯಕ ಎಂಜಿನಿಯರ್ ಹೇಮಂತ್ ಕುಮಾರ್ ಆಗಮಿಸಿದ್ದರು. ಅಧಿಕಾರಿಗಳು ಸ್ಥಳ್ಕಕೆ ಬರುವ ಸುದ್ದಿ ತಿಳಿದು ಟೋಲ್ ವಿರೋಧಿ ಹೋರಾಟಗಾರರು ಸ್ಥಳದಲ್ಲಿ ಜಮಾಯಿಸಿದರು.

ಸ್ಥಳಕ್ಕೆ ಬಂದ ಅಧಿಕಾರಿಗಳು ಟೋಲ್‌ವಿರೋಧಿ ಮುಖಂಡರೊಂದಿಗೆ ಟೋಲ್‌ನ ವಿವರವನ್ನು ನೀಡಿದರು. ಈ ವೇಳೆ ಯಾವುದೇ ಕಾರಣಕ್ಕೂ ಇಲ್ಲಿ ಟೋಲ್ ನಿರ್ಮಾಣಕ್ಕೆ ಅವಕಾಶ ನೀಡುವುದಿಲ್ಲ ಎಂದು ಪಟ್ಟು ಹಿಡಿದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಈ ವೇಳೆ ಟೋಲ್‌ ಗುತ್ತಿಗೆ ವಹಿಸಿಕೊಂಡ ಕಂಪೆನಿಯ ಸಿಬ್ಬಂದಿಗಳು ಟೋಲ್‌ವಿರೋಧಿ ಹೋರಾಟಗಾರ ಮಧ್ಯೆ ಮಾತಿನ ಚಕಮಕಿ ನಡೆಯಿತು. ಈ ವೇಳೆ ಹೋರಾಟಗಾರರು ಟೋಲ್ ಕಂಪೆನಿ ಸಿಬ್ಬಂದಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಬಳಿಕ ಪೊಲೀಸರ ಮಧ್ಯೆಸ್ಥಿಕೆಯಲ್ಲಿ ಅವರನ್ನು ಕಾರಿನಲ್ಲಿ ಅಲ್ಲಿಂದ ತೆರಳುವಂತೆ ಸೂಚಿಸಲಾಯಿತು. ಇತ್ತ ಪೊಲೀಸರು ಹೋರಾಟಗಾರರನ್ನು ಸಮಾಧಾನ ಪಡಿಸಿದರು.

Related posts

ಸಿಬ್ಬಂದಿಗಳಿಗೆ ಝೂನೋಟಿಕ್ ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕುರಿತ ತರಬೇತಿ ಸಾಧನಗಳನ್ನು ಪ್ರಾರಂಭಿಸಿದ ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್

ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಪ್ರತಿಭಾವಂತ ವಿದ್ಯಾರ್ಥಿ ದೀಪೇಶ್ ದೀಪಕ್ ಶೆಣೈ ದ್ವಿತೀಯ

ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣ – ತಮ್ಮ ವಕಾಲತ್ತನ್ನು ವಾಪಾಸು ಪಡೆದ ಆರೋಪಿ ಪ್ರವೀಣ್ ಚೌಗುಲೆ ಪರ ವಕೀಲರು