“ನನ್ನೊಂದಿಗೆ ಸಹಕರಿಸು ಇಲ್ಲಾಂದ್ರೆ 24 ತುಂಡು ಮಾಡುವೆ” ಎಂದು ವಾಟ್ಸ್ಆ್ಯಪ್ ಸಂದೇಶ – ಆರೋಪಿ ವಶಕ್ಕೆ

ಸುರತ್ಕಲ್ : “ನನ್ನೊಂದಿಗೆ ಸಹಕರಿಸು ಇಲ್ಲಾಂದ್ರೆ 24 ತುಂಡು ಮಾಡುವೆ” ಎಂದು ಸುರತ್ಕಲ್ ಇಡ್ಯಾದ ಅನ್ಯಕೋಮಿನ ಯುವಕನೊಬ್ಬ ನೆರೆಮನೆಯ ಯುವತಿಯೊಬ್ಬಳಿಗೆ ವಾಟ್ಸ್‌ಆ್ಯಪ್ ಸಂದೇಶ ಕಳುಹಿಸಿರುವ ಘಟನೆ ಬುಧವಾರ ಬೆಳಕಿಗೆ ಬಂದಿದೆ.

ಅಸಭ್ಯ ಸಂದೇಶ ಕಳುಹಿಸಿ ಕಿರುಕುಳ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸುರತ್ಕಲ್ ಪೊಲೀಸರು ಯುವಕನನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

ಈತ ಯುವತಿಯ ಸಹೋದರನಿಗೆ ವಾಟ್ಸ್‌ಆ್ಯಪ್ ಮೆಸೇಜ್ ಮಾಡಿ ಬೆದರಿಕೆ ಹಾಕಿದ್ದಾನೆ. ಇದರಿಂದ ಆತಂಕಗೊಂಡ ಯುವತಿಯ ಕುಟುಂಬ ಸುರತ್ಕಲ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸದ್ಯ ಸುರತ್ಕಲ್ ಪೊಲೀಸರು ಯುವಕನನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಮಾರಿದ ಹಳೆಯ ಬಸ್ಸನ್ನು ಕದ್ದು ತಂದ ಆರೋಪ – ತಂದೆ ಮಗನ ವಿರುದ್ಧ ದೂರು ದಾಖಲು !

ತಾಯಿ ಹಾಗೂ ಇಬ್ಬರು ಮಕ್ಕಳು ನಾಪತ್ತೆ