ನೈರುತ್ಯ ಪದವೀಧರರ ಕ್ಷೇತ್ರ ಮತ ಎಣಿಕೆ ಮುಕ್ತಾಯ

ನೈರುತ್ಯ ಪದವೀಧರರ ಕ್ಷೇತ್ರದ ಮತ ಎಣಿಕೆ ಮುಕ್ತಾಯಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಡಾ. ಧನಂಜಯ್ ಸರ್ಜಿಗೆ ಭರ್ಜರಿ ಗೆಲುವು ಸಾಧಿಸಿದ್ದಾರೆ. 37627 ಮತಗಳನ್ನು ಪಡೆದ ಡಾ. ಧನಂಜಯ್ ಸರ್ಜಿ, 6935 ಮತಗಳ ಅಂತರದಿಂದ ಭರ್ಜರಿ ಗೆಲುವನ್ನು ತನ್ನದಾಗಿಸಿಕೊಂಡಿದ್ದಾರೆ.

ಬಿಜೆಪಿ ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಅವರು ಮೂರನೇ ಸ್ಥಾನದಲ್ಲಿದ್ದು, 7039 ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ 13516 ಮತಗಳನ್ನು ಪಡೆದಿದ್ದಾರೆ, ಇದರಿಂದಾಗಿ ಕಾಂಗ್ರೆಸ್‌ಗೆ ತೀವ್ರ ಮುಖಭಂಗವಾಗಿದೆ.

30692+1 ಕೋಟಾ ನಿಗದಿಯಾಗಿದ್ದರೂ, ಡಾ. ಧನಂಜಯ್ ಸರ್ಜಿ ನಿಗದಿತ ಕೋಟಾಕಿಂತ 6935 ಹೆಚ್ಚುವರಿ ಮತಗಳನ್ನು ಪಡೆದಿದ್ದಾರೆ. ಮೊದಲ ಪ್ರಾಶಸ್ತ್ಯದ ಮತಗಳಲ್ಲಿಯೇ ಗೆಲುವು ಸಾಧಿಸಿರುವ ಡಾ. ಧನಂಜಯ್ ಸರ್ಜಿಯ ಭರ್ಜರಿ ಗೆಲುವು ಬಿಜೆಪಿಗೆ ಮತ್ತೊಂದು ಬಲವರ್ಧನೆ ಆಗಿದೆ.

ಈ ಚುನಾವಣೆಯಲ್ಲಿ 5115 ಕುಲಗೆಟ್ಟ ಮತಗಳು ದಾಖಲಾಗಿವೆ.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ – ಬ್ರಿಟಿಷ್ ಆಡಳಿತವನ್ನೂ ಮೀರಿಸಿದ ಸಿದ್ಧರಾಮಯ್ಯ ಸರ್ಕಾರ : ಯಶ್‌ಪಾಲ್ ಸುವರ್ಣ

ಮಾರಿದ ಹಳೆಯ ಬಸ್ಸನ್ನು ಕದ್ದು ತಂದ ಆರೋಪ – ತಂದೆ ಮಗನ ವಿರುದ್ಧ ದೂರು ದಾಖಲು !