ಪುತ್ತೂರಿನ ಲಾಡ್ಜ್‌ನಲ್ಲಿ ಅನ್ಯಕೋಮಿನ ಜೋಡಿ ಪತ್ತೆ

ಪುತ್ತೂರು : ಲಾಡ್ಜ್ ಒಂದರಲ್ಲಿ ಯಾವುದೇ ಮಾಹಿತಿ ನೀಡದೆ ರೂಂ ಪಡೆದಿದ್ದ ಮುಸ್ಲಿಂ ಯುವಕ, ಹಿಂದೂ ಯುವತಿಯನ್ನು ಪೊಲೀಸರು ಮನೆಗೆ ಕಳುಹಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.

ನೆಹರೂನಗರದಲ್ಲಿ ಕಾರ್ಯಾಚರಿಸುತ್ತಿರುವ ಲಾಡ್ಜ್‌ ಒಂದರಲ್ಲಿ ಜೋಡಿ ರೂಂ ಪಡೆದಿದ್ದಾರೆ ಎಂದು ಪೋಲೀಸರಿಗೆ ಹಿಂದೂಪರ ಸಂಘಟನೆ ಕಾರ್ಯಕರ್ತರು ಮಾಹಿತಿ ನೀಡಿದ್ದಾರೆ.

ಈ ವೇಳೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಲಾಡ್ಜ್‌ನ ದಾಖಲೆ ಪುಸ್ತಕ ಪರಿಶೀಲಿಸಿದ್ದಾರೆ. ಆದರೆ ಜೋಡಿಯ ದಾಖಲೆ ಪಡೆಯದೆ ಲಾಡ್ಜ್ ಸಿಬ್ಬಂದಿಗಳು ರೂಂ ನೀಡಿದ್ದಾರೆ.

ಬಳಿಕ ಪೊಲೀಸರು ಅನ್ಯಕೋಮಿನ ಜೋಡಿಯನ್ನು ವಿಚಾರಣೆ ನಡೆಸಿ ಮನೆಗೆ ಕಳುಹಿಸಿದ್ದಾರೆ. ವಿಚಾರಣೆಗಾಗಿ ಲಾಡ್ಜ್ ಸಿಬ್ಬಂದಿಗಳನ್ನು ಪೊಲೀಸರು ಠಾಣೆಗೆ ಕರೆದೊಯ್ದಿದ್ದಾರೆ.

ಲಾಡ್ಜ್‌ನಲ್ಲಿ ಅನೈತಿಕ ಚಟುವಟಿಕೆಗಳು ನಡೆಯುತ್ತಿದೆ ಎಂದು ಹಿಂದೂಪರ ಸಂಘಟನೆಗಳ ಆರೋಪಿಸಿದ್ದು, ಕೆಲ ಕಾಲ ಲಾಡ್ಜ್ ಬಳಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

Related posts

ಮಣಿಪಾಲದಲ್ಲಿ ಸಂಚಾರ ನಿಯಮ ಉಲ್ಲಂಘನೆ: ಐವರು ವಿದ್ಯಾರ್ಥಿಗಳು ಒಂದೇ ದ್ವಿಚಕ್ರ ವಾಹನದಲ್ಲಿ!

ಗ್ಯಾಸ್ ಹಚ್ಚುವಾಗ ಬೆಂಕಿ ತಗುಲಿ ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ನೇತ್ರಾವತಿ ಹೋರಾಟಕ್ಕೆ ಸಜ್ಜು – ತೋನ್ಸೆ ಜಯಕೃಷ್ಣ ಶೆಟ್ಟಿ