ನಡುರಸ್ತೆಯಲ್ಲೇ ಗೋವಿನ ರುಂಡ, ದೇಹದ ಭಾಗಗಳು ಪತ್ತೆ : ಸ್ಥಳೀಯರಿಂದ ಆಕ್ರೋಶ

ಬೈಂದೂರು : ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಜಡ್ಕಲ್ ಸಮೀಪ ನಡುರಸ್ತೆಯಲ್ಲಿ ಗೋವಿನ ರುಂಡಗಳು, ಮತ್ತು ದೇಹದ ಭಾಗಗಳು ಪತ್ತೆಯಾಗಿವೆ. ಬೈಂದೂರು ಶಾಸಕ ಗುರುರಾಜ್‌ ಗಂಟಿಹೊಳೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೈಂದೂರು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಜಿಲ್ಲೆಯಲ್ಲಿ ಗೋವು ಕಳ್ಳತನ, ಅಕ್ರಮ ಸಾಗಾಟ, ಹತ್ಯೆ‌ಗಳು ನಡೆಯುತ್ತಿದ್ದರೂ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಯಾವುದೇ ಸೂಕ್ತ ಕ್ರಮ ಕೈಗೊಳ್ಳುವುದಿಲ್ಲ ಎಂದು ದೂರಿದ್ದಾರೆ. ಹಿಂದೂ ಸಂಘಟನೆಗಳು ಈ ಬಗ್ಗೆ ಸಾಕಷ್ಟು ಹೋರಾಟ ಮಾಡಿದರೂ ಅಧಿಕಾರಿಗಳಿಗೆ ಮನವಿ ನೀಡಿದರೂ ಯಾವುದೇ ಕ್ರಮ ಆಗುತ್ತಿಲ್ಲ. ಬೈಂದೂರಿನ ಹಲವೆಡೆ ಗೋವು ಹತ್ಯೆ ನಡೆಸಿ ಗೋವಿನ ಅಂಗಾಂಗಳನ್ನು ಬೀದಿಯಲ್ಲಿ ಎಸೆದು ಶಾಂತಿಭಂಗ ಮಾಡುವ ಕೆಲಸ ಮಾಡಲಾಗುತ್ತಿದೆ. ಹಿಂದೂ ಸಮಾಜ ತಿರುಗಿ ಬೀಳುವ ಮುನ್ನ ಗೋವು ಹಂತಕರನ್ನು ಬಂಧಿಸಬೇಕು ಎಂದು ಶಾಸಕ ಗುರುರಾಜ್ ಗಂಟಿಹೊಳೆ ಒತ್ತಾಯಿಸಿದ್ದಾರೆ.

ಮಾಂಸಕ್ಕಾಗಿ ಗೋ ಹತ್ಯೆ ಮಾಡಿ ಹಸುವಿನ ತಲೆ ಕೈಕಾಲು ದೇಹದ ಇತರೆ ಭಾಗಗಳನ್ನು ಗೋಣಿಚೀಲದಲ್ಲಿ ಕಟ್ಟಿ ಎಸೆದು ಹೋಗಿರುವ ಸಾಧ್ಯತೆ ಇದೆ. ಈ ಬಗ್ಗೆ ಸೂಕ್ತ ತನಿಖೆ ಆಗಬೇಕು ಎಂದು ಶಾಸಕರು, ಹಿಂದೂಪರ ಸಂಘಟನೆಗಳು ಒತ್ತಾಯಿಸಿವೆ.

Related posts

ಷೇರು ವಹಿವಾಟಿನ ಬಗ್ಗೆ ಸಲಹೆ ನೀಡುವುದಾಗಿ ಯುವಕನಿಗೆ ವಂಚನೆ

ಉಳ್ಳಾಲದಲ್ಲಿ ಪಶ್ಚಿಮ ಬಂಗಾಳ ಮೂಲದ ಯುವತಿಯ ಮೇಲೆ ಗ್ಯಾಂಗ್ ರೇಪ್

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ರಕ್ತಸ್ರಾವ ಅಸ್ವಸ್ಥತೆ ಚಿಕಿತ್ಸಾಲಯ ಉದ್ಘಾಟನೆ – ಆಶಾ ಕಾರ್ಯಕರ್ತರಿಗಾಗಿ ಕಾರ್ಯಾಗಾರ