ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ನಕಲಿ ಫೇಸ್‌ಬುಕ್ ಖಾತೆ ಸೃಷ್ಟಿ

ಉಡುಪಿ : ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆಯವರ ಹೆಸರು ಬಳಸಿ ನಕಲಿ ಖಾತೆಯನ್ನು ಫೇಸ್‌ಬುಕ್‌ನಲ್ಲಿ ಸೃಷ್ಟಿಸಲಾಗಿದೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಸೊರಕೆ, ನಕಲಿ ಖಾತೆಯಿಂದ ವಿನಂತಿಗಳು ಅಥವಾ ಸಂದೇಶಗಳನ್ನು ಕಳುಹಿಸುತ್ತಿರುವ ಸಾಧ್ಯತೆ ಇದೆ. ಅದರಿಂದ ಬರುವ ಯಾವುದೇ ಸಂದೇಶಗಳಿಗೆ ಪ್ರತಿಕ್ರಿಯಿಸಬೇಡಿ. ಅಂತಹ ಖಾತೆಯನ್ನು ತಕ್ಷಣವೇ ಫೇಸ್‌ಬುಕ್‌ಗೆ ರಿಪೋರ್ಟ್ ಮಾಡಿ ಮತ್ತು ನಮ್ಮ ಗಮನಕ್ಕೆ ತನ್ನಿ. ನಾವು ಈ ಸಮಸ್ಯೆಯನ್ನು ಬಗೆಹರಿಸಲು ಪ್ರಯತ್ನಿಸುತ್ತೇವೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Related posts

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ

ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯಗೊಳಿಸಿ – ಕರ್ನಾಟಕ ಯುವರಕ್ಷಣಾ ವೇದಿಕೆ

ಸ್ಕೂಟರ್ ಹಾಗೂ ಗೂಡ್ಸ್ ರಿಕ್ಷಾ ಮುಖಮುಖಿ ಡಿಕ್ಕಿ – ಸವಾರ ಮೃತ್ಯು, ಸಹಸವಾರ ಗಂಭೀರ