ಕ್ರಿಕೆಟ್ ಬೆಟ್ಟಿಂಗ್ ದಂಧೆಗೆ ದಾಳಿ, ಓರ್ವ ಸೆರೆ

ಕುಂದಾಪುರ : ಫೆರಿ ರಸ್ತೆಯ ಪಾರ್ಕ್ ಬಳಿ ಆಕ್ರಮ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದವರ ಮೇಲೆ ಕುಂದಾಪುರ ಎಸ್‌ಐ ನಂಜಾನಾಯ್ಕ ಎನ್. ದಾಳಿ ಮೇಲೆ ದಾಳಿ ನಡೆಸಿ ನಗದು, ಸೊತ್ತು ವಶಪಡಿಸಿಕೊಂಡಿದ್ದಾರೆ.

ದಾಳಿ ವೇಳೆ ಸತೀಶ್ ಎಂಬಾತನನ್ನು ವಶಕ್ಕೆ ಪಡೆದುಕೊಂಡಿದ್ದು, ವಿಕ್ಕಿ ಯಾನೆ ವಿಕಾಸ್ ಹಾಗೂ ವಿವೇಕ ಎಂಬ ಇಬ್ಬರು ಪರಾರಿಯಾಗಿದ್ದಾರೆ.

ಹಿಮಾಚಲ ಪ್ರದೇಶದ ಧರ್ಮಶಾಲಾ ಸ್ಟೇಡಿಯಮ್‌ನಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಲಕ್ನೋ ತಂಡಗಳ ನಡುವೆ ನಡೆಯುತ್ತಿದ್ದ ಟಿ20 ಕ್ರಿಕೆಟ್ ಮ್ಯಾಚ್‌ಗೆ ಸಂಬಂಧಪಟ್ಟು ಮೊಬೈಲ್ ಫೋನ್‌ನಲ್ಲಿ ಪಾರ್ಕರ್ ಎಂಬ ಕ್ರಿಕೆಟ್ ಬೆಟ್ಟಿಂಗ್ ವೆಬ್‌ಸೈಟ್ ಮೂಲಕ ದಂಧೆ ನಡೆಸುತ್ತಿದ್ದರು. 4,700 ರೂ. ಹಾಗೂ ಮೊಬೈಲ್ ಫೋನ್ ಸ್ವಾಧೀನಪಡಿಸಿಕೊಂಡಿದ್ದು, ಪ್ರಕರಣ ದಾಖಲಾಗಿದೆ.

Related posts

ಮೀನು ವ್ಯಾಪಾರಿಗೆ 90 ಲಕ್ಷ ರೂ.ವಂಚನೆ – ದೂರು ದಾಖಲು

ಕಾವಡಿ ಗ್ರಾಮದಲ್ಲಿ ಮಲ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣದ ವಿರುದ್ಧ ಪ್ರತಿಭಟನೆ

ಟೋಲ್ ಸುಲಿಗೆಗೆ ಸದ್ಯ ಬ್ರೇಕ್; ಬಸ್ ಮಾಲಕರು ಖುಷ್