ಪ್ರವಾಸಿ ಮಂದಿರದ ಕರೆಂಟ್ ಕಟ್ : ಶಾಸಕ ಯಶ್‌ಪಾ‌ಲ್ ಸುವರ್ಣ ಆಕ್ರೋಶ

ಉಡುಪಿ : ನಗರದ ಹಳೆ ಪ್ರವಾಸಿ ಮಂದಿರದ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದ್ದಕ್ಕೆ ಮೆಸ್ಕಾಂ ಅಧಿಕಾರಿಗಳು ವಿದ್ಯುತ್ ಸಂಪರ್ಕ ಕಡಿತಗೊಳಿಸಿದ ಘಟನೆ ನಡೆದಿದೆ. ಉಡುಪಿ ಶಾಸಕರ ಮಧ್ಯಪ್ರವೇಶದ ಬಳಿಕ ತಾತ್ಕಾಲಿಕ ಪುನರ್ ಸಂಪರ್ಕ ನೀಡಿದ ಪ್ರಸಂಗ ನಡೆದಿದ್ದು, ಸರಕಾರ ದಿವಾಳಿಯಾಗಿದೆ ಎಂದು ಶಾಸಕ ಯಶ್‌ಪಾ‌ಲ್ ಸುವರ್ಣ ಕಿಡಿಕಾರಿದ್ದಾರೆ.

ಬನ್ನಂಜೆಯಲ್ಲಿರುವ ಹಳೆ ಪ್ರವಾಸಿ ಮಂದಿರದ ವಿದ್ಯುತ್ ಬಿಲ್ ಬಾಕಿ ಇದ್ದು ಕಟ್ಟದ ಕಾರಣ ವಿದ್ಯುತ್ ಸಂಪರ್ಕ ಕಡಿತಗೊಳಿಸಿ ಮೆಸ್ಕಾಂ ಇಲಾಖೆ ತನ್ನ ನಿಯಮ ಪಾಲನೆ ಮಾಡಿತ್ತು. ಪ್ರವಾಸಿ ಮಂದಿರದಲ್ಲಿ ಇಬ್ಬರು ಪ್ರವಾಸಿಗರಿದ್ದು ಕತ್ತಲೆಯಲ್ಲಿ ಕುಳಿತುಕೊಳ್ಳಬೇಕಾದ ಪರಿಸ್ಥಿತಿ ಉಂಟಾಯಿತು. ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಉಡುಪಿ ಶಾಸಕ ಯಶ್‌ಪಾ‌ಲ್ ಸುವರ್ಣ ಅವರು ಪ್ರವಾಸಿ ಮಂದಿರದ ಸಿಬಂದಿಗಳಿಂದ ಮಾಹಿತಿ ಪಡೆದು ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ ಪರಿಸ್ಥಿತಿಯನ್ನು ವಿವರಿಸಿದ್ದಾರೆ. ಬಳಿಕ ಮೆಸ್ಕಾಂ ಅಧಿಕಾರಿಗಳು ಆಗಮಿಸಿ ತಾತ್ಕಾಲಿಕ ವಿದ್ಯುತ್ ಸಂಪರ್ಕವನ್ನು ನೀಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಶಾಸಕ ಯಶ್‌ಪಾ‌ಲ್ ಸುವರ್ಣ ಬರೆದುಕೊಂಡಿದ್ದು, ಪಡುಬಿದ್ರೆ ಗ್ರಾಮ ಪಂಚಾಯತ್ ಕಚೇರಿ, ತೆಂಕನಿಡಿಯೂರು ಸರಕಾರಿ ಶಾಲೆಯ ವಿದ್ಯುತ್ ಕಡಿತಗೊಳಿಸಲು ಮೆಸ್ಕಾಂ ಇಲಾಖೆ ಮುಂದಾಗಿದೆ. ಸರಕಾರಿ ಕಚೇರಿಯ ವಿದ್ಯುತ್ ಬಿಲ್ ಕಟ್ಟಲೂ ಸರಕಾರದ ಬೊಕ್ಕಸದಲ್ಲಿ ಹಣವಿಲ್ಲವೆ? ರಾಜ್ಯ ಸರ್ಕಾರದ ಆರ್ಥಿಕ ದಿವಾಳಿತನಕ್ಕೆ ಇದಕ್ಕಿಂತ ನಿದರ್ಶನ ಬೇಕೇ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related posts

ಜನಿವಾರ ತೆಗೆಸಿದ ಪ್ರಕರಣ – ಒಂದು ಸಮಾಜದ ಮೇಲೆ ದಬ್ಬಾಳಿಕೆ ಸರಿಯಲ್ಲ : ಕೋಟ

ತಾಲೂಕು ಸರಕಾರಿ ಆಸ್ಪತ್ರೆ,‌‌ ಆರೋಗ್ಯ ಕೇಂದ್ರಗಳಿಗೆ ಅಧಿಕಾರಿಗಳ ಭೇಟಿ

ಉಡುಪಿ ಜಿಲ್ಲೆಯಲ್ಲಿ ಉಪವಾಸ, ಧ್ಯಾನದೊಂದಿಗೆ ಗುಡ್ ಫ್ರೈಡೆ ಆಚರಣೆ