ಶಾಮಿಯಾನ ಹಾಕುತ್ತಿದ್ದ ವೇಳೆ ಕರೆಂಟ್ ಶಾಕ್; ಓರ್ವ ಮೃತ್ಯು, ನಾಲ್ವರಿಗೆ ಗಾಯ

ಬಂಟ್ವಾಳ : ಖಾಸಗಿ ಸ್ಥಳವೊಂದರಲ್ಲಿ ಶಾಮಿಯಾನ ಹಾಕುತಿದ್ದ ವೇಳೆ ಕಬ್ಬಿಣದ ರಾಡ್ ವಿದ್ಯುತ್ ತಂತಿಗೆ ಸ್ಪರ್ಶಿಸಿ ಬಿಹಾರ ಮೂಲದ ಯುವಕನೋರ್ವ ಮೃತಪಟ್ಟು, ನಾಲ್ವರು ಗಾಯಗೊಂಡಿರುವ ಘಟನೆ ಕಡೇಶ್ವಾಲ್ಯ ಗ್ರಾಮದ ಕಾಡಬೆಟ್ಟು ಎಂಬಲ್ಲಿ ಶನಿವಾರ ಮದ್ಯಾಹ್ನ ನಡೆದಿದೆ.

ಮೃತ ದುರ್ದೈವಿಯನ್ನು ಬಿಹಾರ ಮೂಲದ ಕುಂದನ್ ಕುಮಾರ್ ಮಂಡಲ್ (18) ಎಂದು ಗುರುತಿಸಲಾಗಿದೆ.

ಕಡೇಶ್ವಾಲ್ಯ ಗ್ರಾಮದ ಪ್ರಸನ್ನ, ಜಾರ್ಖಂಡ್ ಮೂಲದ ಬಬ್ಲು, ಪ್ರದೀಪ್, ಪಶ್ಚಿಮ ಬಂಗಾಳದ ರೋಹಿತ್ ಎಂಬವರು ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಕಡೇಶ್ವಾಲ್ಯ ಗ್ರಾಮದ ಕಾಡಬೆಟ್ಟು ಎಂಬಲ್ಲಿ ಕೋಳಿ ಅಂಕ ನಡೆಸುವ ಉದ್ದೇಶದಿಂದ ಶಾಮಿಯಾನ ಹಾಕುತಿದ್ದ ವೇಳೆ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.

ಮೃತದೇಹವನ್ನು ಬಂಟ್ವಾಳ ತಾಲೂಕು ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಬಂಟ್ವಾಳ ಗ್ರಾಮಾಂತರ ಠಾಣಾ ನಿರೀಕ್ಷಕ ಶಿವಕುಮಾರ್, ಠಾಣಾಧಿಕಾರಿ ಹರೀಶ್, ಗ್ರಾಮ ಕರಣಿಕ ಕರಿಬಸಪ್ಪ ಸ್ಥಳಕ್ಕೆ ಭೇಟಿ ನೀಡಿ, ಮಹಜರು ನಡೆಸಿದ್ದಾರೆ.

Related posts

ನಿಲ್ಲಿಸಿದ್ದ ಮೀನುಗಾರಿಕಾ ಬೋಟ್‌ನಲ್ಲಿ ಅಗ್ನಿ ಅವಘಡ – 15 ಲಕ್ಷ ರೂ.ನಷ್ಟ

ಸ್ಕೂಟರ್ ಹಾಗೂ ಗೂಡ್ಸ್ ರಿಕ್ಷಾ ಮುಖಮುಖಿ ಡಿಕ್ಕಿ – ಸವಾರ ಮೃತ್ಯು, ಸಹಸವಾರ ಗಂಭೀರ

ಫಾಸ್ಟ್‌ಟ್ಯಾಗ್‌ ಹೊಸ ನಿಯಮ ಜಾರಿ: ಕಡಿಮೆ ಬ್ಯಾಲೆನ್ಸ್ ಇದ್ರೆ ದುಪ್ಪಟ್ಟು ದಂಡ.!