ಚಂಡಮಾರುತ ಎಫೆಕ್ಟ್: ಉಡುಪಿಯಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ

ಉಡುಪಿ : ಉಡುಪಿಗೆ ತಮಿಳುನಾಡು ಚಂಡಮಾರುತದ ಪರಿಣಾಮ ಬೀರಿದ್ದು ಭಾರೀ ಮಳೆಯಾಗುತ್ತಿದೆ. ಸಂಜೆ ಬಳಿಕ ಸುಮಾರು ಎರಡು ತಾಸು ಗುಡುಗು ಮಿಂಚು ಸಹಿತ ಭಾರೀ ಮಳೆಯಾಯಿತು. ಮಳೆಗೆ ಉಡುಪಿ ನಗರದ ಕೆಲ ಮುಖ್ಯರಸ್ತೆಗಳು ಜಲಾವೃತಗೊಂಡವು.

ಜಲಾವೃತಗೊಂಡ ರಸ್ತೆಗಳಲ್ಲಿ ಸಂಚರಿಸಲು ವಾಹನ ಸವಾರರು ಹರಸಾಹಸ ಪಡಬೇಕಾಯಿತು. ಸಿಡಿಲು, ಮಿಂಚು ಸಹಿತ ಗಾಳಿ ಮಳೆಗೆ ಹಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಿದೆ. ಕೆಲವು ವಾಹನಗಳು ರಸ್ತೆ ಮಧ್ಯೆಯೇ ಕೆಟ್ಟುನಿಂತ ಘಟನೆಗಳು ನಡೆದವು. ದಿಢೀರ್ ಮಳೆಯ ಹೊಡೆತಕ್ಕೆ ಉಡುಪಿ ನಗರಭಾಗದಲ್ಲಿ ಜನಜೀವನ ಅಕ್ಷರಶಃ ಅಸ್ತವ್ಯಸ್ತಗೊಂಡಿತು. ಜಿಲ್ಲೆಯಾದ್ಯಂತ ಮುಂಜಾಗ್ರತಾ ಕ್ರಮವಾಗಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು ರಾತ್ರಿಯೂ ಮಳೆ ಮುಂದುವರೆಯುವ ಸಾಧ್ಯತೆಗಳಿವೆ.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ