ಉಡುಪಿ ನಗರಸಭೆ ವ್ಯಾಪ್ತಿಯ ಚಕ್ರತೀರ್ಥ ಮಾರ್ಗದ ಕಿರು ಸೇತುವೆ ಹಾನಿ : ಶಾಸಕ ಯಶ್‌ಪಾಲ್ ಸುವರ್ಣ ಭೇಟಿ ನೀಡಿ ಪರಿಶೀಲನೆ

ಉಡುಪಿ ನಗರಸಭೆ ವ್ಯಾಪ್ತಿಯ ಮೂಡುಸಗ್ರಿ ವಾರ್ಡಿನಲ್ಲಿ ಮಳೆಯಿಂದಾಗಿ ಹಾನಿಗೀಡಾದ ಚಕ್ರತೀರ್ಥ ಮಾರ್ಗದ ಕಿರುಸೇತುವೆ ವಾಹನ ಸಂಚಾರಕ್ಕೆ ಅಪಾಯ ಸ್ಥಿತಿಯಲ್ಲಿರುವ ಹಿನ್ನಲೆಯಲ್ಲಿ ಉಡುಪಿ ಶಾಸಕರಾದ ಶ್ರೀ ಯಶ್‌ಪಾಲ್ ಸುವರ್ಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮುಂಜಾಗ್ರತಾ ಕ್ರಮವಾಗಿ ಈಗಾಗಲೇ ಈ ಮಾರ್ಗದಲ್ಲಿ ವಾಹನ ಸಂಚಾರ ನಿರ್ಬಂಧಿಸಿದ್ದು, ಈಗಾಗಲೇ ಸುಮಾರು ರೂ. 13 ಲಕ್ಷ ಅನುದಾನವನ್ನು ಕಿರು ಸೇತುವೆಯ ಮರು ನಿರ್ಮಾಣಕ್ಕೆ ಮಂಜೂರು ಮಾಡಿದ್ದು ಅತೀ ಶೀಘ್ರದಲ್ಲಿ ಕಾಮಗಾರಿ ಆರಂಭಿಸಲು ನಗರಸಭೆಯ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯ ನಗರಸಭಾ ಸದಸ್ಯರಾದ ಶ್ರೀಮತಿ ಭಾರತಿ ಪ್ರಶಾಂತ್, ನಗರ ಬಿಜೆಪಿ ಅಧ್ಯಕ್ಷರಾದ ಶ್ರೀ ದಿನೇಶ್ ಅಮೀನ್, ನಗರ ಸಭಾ ಸದಸ್ಯರಾದ ಗಿರೀಶ್ ಅಂಚನ್, ಸ್ಥಳೀಯ ಮುಖಂಡರಾದ ಶ್ರೀ ಈಶ್ವರ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

Related posts

ನೆಕ್ಲಾಜೆ ಶ್ರೀ ಕಾಳಿಕಾಂಬೆಗೆ ಸ್ವರ್ಣ ಪಾದುಕೆ ಸಮರ್ಪಣೆ

ಶಾಸ್ತ್ರೀಪಾರ್ಕ್‌ ಫ್ಲೈಓವರ್‌ ತಳಭಾಗಕ್ಕೆ ಪೊಲೀಸ್‌ ನಿಯೋಜನೆ

ಕಾರು ಕಳವು ಗೈದ ಆರೋಪಿ ಪೊಲೀಸ್ ವಶಕ್ಕೆ