ಕೃಷ್ಣಮಠದಲ್ಲಿ 100 ಭರತನಾಟ್ಯ ಕಲಾವಿದರಿಂದ ನೃತ್ಯ ಪ್ರದರ್ಶನ – ಪರ್ಯಾಯ ಶ್ರೀಗಳಿಂದ ಚಾಲನೆ

ಉಡುಪಿ : ಅಭಿಘ್ನ ನೃತ್ಯಾಲಯಂ ಸಂಸ್ಥೆ ವತಿಯಿಂದ ಉಡುಪಿ ಶ್ರೀಕೃಷ್ಣ ಮಠ ಪರ್ಯಾಯ ಪುತ್ತಿಗೆ ಮಠದ ಸಹಯೋಗದೊಂದಿಗೆ ಶ್ರೀಕೃಷ್ಣಮಠದ ಮಧ್ವಮಂಟದಲ್ಲಿ ಹಾಗೂ ರಾಜಾಂಗಣದಲ್ಲಿ ಬುಕ್ ಆಫ್ ರೆಕಾರ್ಡ್ ದಾಖಲೆಗಾಗಿ 100 ಮಂದಿ 14 ಗಂಟೆಗಳ ನಿರಂತರ ಭರತನಾಟ್ಯ ಕಾರ್ಯಕ್ರಮಕ್ಕೆ ಪರ್ಯಾಯ ಪುತ್ತಿಗೆ ಶ್ರೀಗಳು ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಹೈದರಾಬಾದ್, ಚೆನ್ನೈ, ವಿಜಯವಾಡ, ಬೆಂಗಳೂರು ಸಹಿತ ವಿವಿಧ ಭಾಗಗಳ ಐದು ವರ್ಷದಿಂದ 60 ವರ್ಷದವರೆಗಿನ ಭರತನಾಟ್ಯ ಕಲಾವಿದರು ಭಾಗವಹಿಸಿದರು. ನಿರಂತರ 14 ಗಂಟೆಗಳ ಕಾಲ ಕರ್ನಾಟಕ ಅಚೀವರ್ಸ್ ಬುಕ್ ಆಫ್ ರೆಕಾರ್ಡ್‌ ದಾಖಲೆಗಾಗಿ ಈ ನೃತ್ಯವನ್ನು ಆಯೋಜಿಸಲಾಗಿತ್ತು. ಬೆಳಿಗ್ಗೆೆಯಿಂದ ಸಂಜೆವರೆಗೆ ಮಧ್ವಮಂಟಪದಲ್ಲಿ ಹಾಗೂ ಸಂಜೆ ಬಳಿಕ ರಾಜಾಂಗಣದಲ್ಲಿ ನೃತ್ಯ ಪ್ರದರ್ಶನ ನಡೆಯಿತು.

Related posts

ಸಿಬ್ಬಂದಿಗಳಿಗೆ ಝೂನೋಟಿಕ್ ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಕುರಿತ ತರಬೇತಿ ಸಾಧನಗಳನ್ನು ಪ್ರಾರಂಭಿಸಿದ ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್

ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಪ್ರತಿಭಾವಂತ ವಿದ್ಯಾರ್ಥಿ ದೀಪೇಶ್ ದೀಪಕ್ ಶೆಣೈ ದ್ವಿತೀಯ

ನೇಜಾರಿನ ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣ – ತಮ್ಮ ವಕಾಲತ್ತನ್ನು ವಾಪಾಸು ಪಡೆದ ಆರೋಪಿ ಪ್ರವೀಣ್ ಚೌಗುಲೆ ಪರ ವಕೀಲರು