ಇಂದ್ರಾಳಿ ರೈಲ್ವೆ ಸೇತುವೆ ಕಾಮಗಾರಿ ಪ್ರಗತಿ ಪರಿಶೀಲಿಸಿದ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ

ಉಡುಪಿ : ರಾಷ್ಟ್ರೀಯ ಹೆದ್ದಾರಿ 169ಎಯಲ್ಲಿ ಇಂದ್ರಾಳಿ ಬಳಿ ಕಳೆದ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ರೈಲ್ವೆ ಮೇಲ್ವೇತುವೆ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಭೇಟಿ ನೀಡಿ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿದರು.

ಇಂದ್ರಾಳಿ ರೈಲ್ವೇ ಮೇಲ್ವೇತುವೆ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳಲು ಇನ್ನೂ 20ರಿಂದ 25 ದಿನಗಳ ಕಾಲಾವಕಾಶ ಬೇಕಾಗಿದ್ದು, ಎಪ್ರಿಲ್ ಕೊನೆಯೊಳಗೆ ಪೂರ್ಣಗೊಳಿಸುವ ವಿಶ್ವಾಸವನ್ನು ಸಂಬಂಧಿತ ಇಲಾಖೆಗಳ ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ತಿಳಿಸಿದ್ದಾರೆ.

ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿ ಕಾಮಗಾರಿಯ ವಿವರ ನೀಡಿದ್ದು, 20 ದಿನಗಳಲ್ಲಿ ಉಳಿದಿರುವ ಕಾಮಗಾರಿಯನ್ನು ಪೂರ್ಣಗೊಳಿಸುವ ಭರವಸೆ ನೀಡಿದ್ದಾರೆ. ಆದರೆ ಬಾಕಿ ಉಳಿದಿರುವ ಕೆಲಸ ನೋಡಿದಾಗ ಈ ತಿಂಗಳ ಕೊನೆಯವರೆಗೆ ಕಾಲಾವಕಾಶ ಬೇಕಾಗಬಹುದು ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದರು.

Related posts

ಅಲೈನ್ಸ್ ಕ್ಲಬ್ ಉಡುಪಿಯಿಂದ ವೈದ್ಯರ ದಿನಾಚರಣೆ : ಪ್ರಸಿದ್ಧ ವೈದ್ಯ ಡಾ.ಆರ್.ಎನ್.ಭಟ್ ಅವರಿಗೆ ಸನ್ಮಾನ

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ರಂಗೋಲಿ ಕಲಾ ಸಾಧಕಿ, ಭಾರತಿ ಮರವಂತೆಗೆ ‘ಮಧುರಚೆನ್ನ ರಾಜ್ಯ ಪ್ರಶಸ್ತಿ’ ಪ್ರದಾನ