ಡೆಂಗ್ಯೂ ಜ್ವರ ನಿಯಂತ್ರಣ ಕುರಿತು ಜಾಗೃತಿ ಅಭಿಯಾನಕ್ಕೆ ಜಿಲ್ಲಾಧಿಕಾರಿ ಚಾಲನೆ

ಬ್ರಹ್ಮಾವರ : ಬ್ರಹ್ಮಾವರದ ವಾರಂಬಳ್ಳಿ ಗ್ರಾಮ ಪಂಚಾಯತ್‌ನ ಮೀನು ಮಾರುಕಟ್ಟೆಯಲ್ಲಿ ಸಾರ್ವಜನಿಕರಿಗೆ ಡೆಂಗ್ಯೂ ಜ್ವರ ನಿಯಂತ್ರಣ ಕುರಿತು ಜಾಗೃತಿ ಮೂಡಿಸಲಾಯಿತು. ಜ್ವರ ತಡೆಗೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಜಾಗೃತಿ ಅಭಿಯಾನಕ್ಕೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಚಾಲನೆ ನೀಡಿ ಸಾರ್ವಜನಿಕರಿಗೆ ಅರಿವು ಮೂಡಿಸಿದರು.

ಈ ಸಂದರ್ಭದಲ್ಲಿ ವರಂಬಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ನಿತ್ಯಾನಂದ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಐ ಪಿ ಗಡದ್, ಪೌರಾಯುಕ್ತ ರಾಯಪ್ಪ, ಜಿಲ್ಲಾ ಮಲೇರಿಯಾ ನಿಯಂತ್ರಣ ಅಧಿಕಾರಿ ಡಾ. ಪ್ರಶಾಂತ್ ಭಟ್, ತಾಲೂಕು ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಇಬ್ರಾಹಿಂಪುರ, ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಹಾಗೂ ಸಾರ್ವಜನಿಕರು ಶಿಬಿರದಲ್ಲಿ ಭಾಗವಹಿಸಿದ್ದರು.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ – ಬ್ರಿಟಿಷ್ ಆಡಳಿತವನ್ನೂ ಮೀರಿಸಿದ ಸಿದ್ಧರಾಮಯ್ಯ ಸರ್ಕಾರ : ಯಶ್‌ಪಾಲ್ ಸುವರ್ಣ

ಮಾರಿದ ಹಳೆಯ ಬಸ್ಸನ್ನು ಕದ್ದು ತಂದ ಆರೋಪ – ತಂದೆ ಮಗನ ವಿರುದ್ಧ ದೂರು ದಾಖಲು !