ಮಕ್ಕಳೊಂದಿಗೆ ಬೆರೆತು ‘ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು’ ಕಾರ್ಯಕ್ರಮದಲ್ಲಿ ಭಾಗವಹಿಸಿದ ಜಿಲ್ಲಾಧಿಕಾರಿ ಮುಲೈ ಮುಗಿಲನ್

ಬಂಟ್ವಾಳ : ರೈತ ದೇಶದ ಬೆನ್ನೆಲುಬು ಸಂತೋಷದೊಂದಿದ್ದರೆ ಇಡೀ ಜಗತ್ತೇ ಸಂತಸ ಪಡುವುದು, ಪ್ರತಿಯೊಬ್ಬರ ಆಹಾರವನ್ನು ಪೂರೈಸಿ ಎಲ್ಲರ ಹಸಿವು ನೀಗಿಸುವ ರೈತ ಯಾವಾಗಲೂ ಸಂತೋಷವಾಗಿರಬೇಕು ಜಿಲ್ಲೆಯ ಹವಾಮಾನದ ಎಡರು ತೊಡರುಗಳನ್ನು ದಾಟಿ ಆತನು ಬದುಕಬೇಕಾಗುತ್ತದೆ. ಈ ನೆಲದ ಸಂಸ್ಕೃತಿಯು ಬೆಳೆದು ಬಂದಿರುವುದು ಕೃಷಿಯಿಂದ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಹೇಳಿದರು.

ರವಿವಾರ ಬಂಟ್ವಾಳ ತಾಲೂಕಿನ ಅನಂತಾಡಿ ಗ್ರಾಮದ ನವ ಭಾರತ್ ಯುವಕ ಸಂಘ (ರಿ) ಅನಂತಾಡಿ ವತಿಯಿಂದ ಪಡಿಪಿರೆ ಗದ್ದೆಯಲ್ಲಿ ಜರಗಿದ 6ನೇ ವರ್ಷದ “ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು” ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ, ಜಿಲ್ಲೆಯ ಒರ್ವ ಉನ್ನತ ಅಧಿಕಾರಿ ಎಂಬ ಯಾವುದೇ ಬಿಗುಮಾನವನ್ನು ಇಡದೆ ಮಕ್ಕಳ ಜೊತೆ ಮಗುವಾಗಿ ಬೆರೆತು ಕೆಸರಿನಲ್ಲಿ ಸಂಭ್ರಮಿಸಿದರು.

ಬಿರುಸಿನ ಮಳೆಯ ಸಂದರ್ಭ ರಜೆ ನೀಡುವ ಬಗ್ಗೆ ಸ್ನೇಹಿತನಂತೆ ಮಕ್ಕಳ ಜೊತೆ ವರ್ತಿಸಿದ್ದ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‌ ಅವರು ಕೆಸರಿನಲ್ಲೂ ಮಕ್ಕಳ ಜೊತೆಗೂಡಿ ಸಂತಸಪಟ್ಟರು. ಗ್ರಾಮಸ್ಥರು, ಮಕ್ಕಳು ಕೂಡ ಇವರೊಂದಿಗೆ ಸಂಭ್ರಮಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಅನೀಶ್ ಅಶ್ವತ್ತಾಡಿ ವಹಿಸಿದ್ದರು. ಡಾಕ್ಟರ್ ರೂಪಲತಾ ಕೊಂಗಲಾಯಿ ಅವರು ಧ್ವಜಾರೋಹಣಗೈದರು. ಸಭಾ ಕಾರ್ಯಕ್ರಮವನ್ನು ಲಯನ್ಸ್ ಕ್ಲಬ್ ಮಾಣಿ ವಲಯ ಅಧ್ಯಕ್ಷರಾದ ರಾಮ್ ಕಿಶಾನ್ ರೈ ಉದ್ಘಾಟಿಸಿದರು. ಕ್ರೀಡಾಕೂಟದ ಕೆಸರುಗದ್ದೆಯ ಉದ್ಘಾಟನೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಸರಕಾರಿ ನೌಕರ ಸಂಘದ ಮಾಜಿ ಅಧ್ಯಕ್ಷರಾದ ಸಂಜೀವ ಪೂಜಾರಿ ಹಾಗೂ ವಿಠಲ ಕೋಟ್ಯಾನ್ ಪೊಯ್ಯೇ ನೆರವೇರಿಸಿದರು. ಮಾಣಿ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕಿರಣ್ ಹೆಗ್ಡೆ, ನಿವೃತ್ತ ಶಿಕ್ಷಕ ರಾಮಣ್ಣ ಗೌಡ ಕೋಂಗಲಾಯಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ನಾರ್ಶ ಮುಖ್ಯ ಶಿಕ್ಷಕ ಗೋಪಾಲಕೃಷ್ಣ ನೆರಳಕಟ್ಟೆ, ಸರಕಾರಿ ಪದವಿ ಪೂರ್ವ ಕಾಲೇಜು ವಾಮದಪದವಿನ ರಾಧಾಕೃಷ್ಣಮೂಲ್ಯ, ಮಲರಾಯ ದೈವ ಪರಿಚಾರಕರುಗಳಾದ ರಾಮಣ್ಣ ಗೌಡ, ಬಾಲಪ್ಪ ಮಡಿವಾಳ, ಲಕ್ಷ್ಮಣ ಪೂಜಾರಿ ಬಾಕಿಲ, ಪದ್ಮನಾಭ ಪೂಜಾರಿ ಈಡೆ ಮುಂಡೆವು ಮೊದಲಾದವರು ಉಪಸ್ಥಿತರಿದ್ದರು.

ಕೆಸರು ಗದ್ದೆಯಲ್ಲಿ ಮಕ್ಕಳು, ಮಹಿಳೆಯರು, ಪುರುಷರಿಗೆ, ವಿವಿಧ ಕ್ರೀಡಾಕೂಟಗಳನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ನಮ್ಮ ತುಳುವ ಸಂಸ್ಕೃತಿಯ ಚಾಪೆ, ಬುಟ್ಟಿ ನೇಯುವುದು, ಮುಟ್ಟಾಲೆ ಕಟ್ಟುವುದು, ತೆಂಗಿನಗರಿ ನೆಯ್ಯುವುದು, ಅಕ್ಕಿ ಮುಡಿ ಕಟ್ಟುವ ಪ್ರಾತ್ಯಕ್ಷತೆ ನಡೆಸಲಾಯಿತು. ಯತೀಶ್ ಪೂಂಜಾವ್ ಸ್ವಾಗತಿಸಿ, ವೆಂಕಟೇಶ್ ಮಾಸ್ಟರ್ ಕಾರ್ಯಕ್ರಮ ನಿರೂಪಿಸಿದರು.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಪ್ರಥಮ ಬಾರಿಗೆ ಯಕ್ಷ ರಂಗದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ

ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ – ಬ್ರಿಟಿಷ್ ಆಡಳಿತವನ್ನೂ ಮೀರಿಸಿದ ಸಿದ್ಧರಾಮಯ್ಯ ಸರ್ಕಾರ : ಯಶ್‌ಪಾಲ್ ಸುವರ್ಣ