ಮಳೆಗಾಲ ಮುಗಿಯುವವರೆಗೆ ಜಿಲ್ಲೆಯಲ್ಲಿ ಟ್ರಕಿಂಗ್ ನಿಷೇಧ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

ದಕ್ಷಿಣ ಕನ್ನಡ : ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಿದ್ದು, ಅದರಲ್ಲೂ ಕರಾವಳಿ ಭಾಗದಲ್ಲಿ ಮಳೆರಾಯ ಅವಾಂತರಗಳನ್ನು ಸೃಷ್ಟಿಯಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆ ಮಳೆಗಾಲ ಮುಗಿಯುವವರೆಗೆ ಜಿಲ್ಲೆಯಲ್ಲಿ ಟ್ರೆಕ್ಕಿಂಗ್ ನಿಷೇಧಿಸಿ ಮತ್ತು ಜಿಲ್ಲೆಯ ಜಲ ಪ್ರದೇಶಗಳಲ್ಲೂ ಅನಧಿಕೃತ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.

ಭಾರಿ ಮಳೆಯಿಂದ ಭೂಕುಸಿತ, ಗುಡ್ಡ ಕುಸಿತ, ಮರ ಬೀಳುವ ಸಾಧ್ಯತೆ ಇರುವುದರಿಂದ ಮುಂಜಾಗೃತ ಕ್ರಮವಾಗಿ ಜಿಲ್ಲೆಯ ಶಿಖರಗಳ ಟ್ರೆಕ್ಕಿಂಗ್, ಸಾಹಸ ಚಟುವಟಿಕೆಗಳಿಗೆ ನಿಷೇಧ ಹೇರಲಾಗಿದೆ.

ಜಲಪಾತ, ಝರಿ, ನದಿ, ಸಮುದ್ರ, ಜಲಾಶಯದ ಪ್ರದೇಶಗಳಲ್ಲೂ ನಿರ್ಬಂಧಿಸಿಲಾಗಿದೆ. ಇನ್ನು ಆದೇಶ ಉಲ್ಲಂಘಿಸಿದರೆ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕ್ರಮದ ಎಚ್ಚರಿಕೆ ನೀಡಲಾಗಿದೆ.

Related posts

ಉಡುಪಿ ಜಿಲ್ಲೆಯಲ್ಲಿ ಉಪವಾಸ, ಧ್ಯಾನದೊಂದಿಗೆ ಗುಡ್ ಫ್ರೈಡೆ ಆಚರಣೆ

ಬಿಎಸ್‌ಎನ್‌ಎಲ್ ಸಂಪರ್ಕದ ಕುಂದು ಕೊರತೆ, ಗುಣಮಟ್ಟ ಉತ್ತಮಗೊಳಿಸುವಿಕೆ ಸಭೆಯಲ್ಲಿ ಸಂಸದ ಕೋಟ ಭಾಗಿ

ನೇತ್ರಾವತಿ ಹೋರಾಟಕ್ಕೆ ಸಜ್ಜು – ತೋನ್ಸೆ ಜಯಕೃಷ್ಣ ಶೆಟ್ಟಿ