ಬೈಂದೂರು ಗುಡ್ಡ ಕುಸಿತ ಪ್ರದೇಶಕ್ಕೆ ಜಿಲ್ಲಾಧಿಕಾರಿ ಭೇಟಿ : ಸೂಕ್ತ ಮುಂಜಾಗರೂಕತಾ ಕ್ರಮಕ್ಕೆ ಸೂಚನೆ

ಬೈಂದೂರು : ಕಳೆದ ಹಲವು ದಿನಗಳಿಂದ ಬೈಂದೂರು ಭಾಗದಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಮಳೆಗೆ ಪಡುವರಿ ಗ್ರಾಮದ ಸೋಮೇಶ್ವರ ಗುಡ್ಡ ಕಳೆದ ಒಂದು ವಾರದಿಂದ ಕುಸಿಯುತ್ತಿದ್ದು ಅಪಾರ ಪ್ರಮಾಣದಲ್ಲಿ ಮಣ್ಣು ರಸ್ತೆಗೆ ಸೇರಿಕೊಳ್ಳುತ್ತಿದೆ.

ಈ ಹಿನ್ನೆಲೆಯಲ್ಲಿ ಶನಿವಾರ ಸಂಜೆ ಉಡುಪಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಭೇಟಿ ನೀಡಿ ಮಾಹಿತಿ ಪಡೆದರು. ಬಳಿಕ ಮಾಧ್ಯಮದೊಂದಿಗೆ ಮಾತನಾಡಿ ತಾತ್ಕಾಲಿಕವಾಗಿ ಟಾರ್ಪಾಲಿನ್ ಅಳವಡಿಸುವ ಮೂಲಕ ನೀರು ಇಂಗದಂತೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಗುಡ್ಡ ಕುಸಿತದ ಬಗ್ಗೆ ಮಾಹಿತಿ ಪಡೆದು ಶಾಶ್ವತ ಪರಿಹಾರ ಮತ್ತು ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಿದರು.ಬಳಿಕ ಜಿಲ್ಲಾಧಿಕಾರಿಗಳು ಒತ್ತಿನೆಣೆ ಪರಿಸರಕ್ಕೆ ಭೇಟಿ ನೀಡಿ ಹೆದ್ದಾರಿ ಪಕ್ಕದಲ್ಲಿರುವ ಕಸದ ವಿಲೇವಾರಿ ಮತ್ತು ಹೇನ್‌ಬೇರು ಬಳಿ ಶಿಥಿಲಗೊಂಡಿರುವ ರಸ್ತೆಯ ಬಗ್ಗೆ ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಐ.ಆ‌ರ್.ಬಿ. ಅಧಿಕಾರಿಗಳಿಗೆ ತಿಳಿಸಿದರು. ಕಡಲ್ಕೊರೆತ ಸಂಭವಿಸಿದ ದೊಂಬೆ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಳೆಗಾಲದಲ್ಲಿ ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿ – ಬ್ರಿಟಿಷ್ ಆಡಳಿತವನ್ನೂ ಮೀರಿಸಿದ ಸಿದ್ಧರಾಮಯ್ಯ ಸರ್ಕಾರ : ಯಶ್‌ಪಾಲ್ ಸುವರ್ಣ

ಮಾರಿದ ಹಳೆಯ ಬಸ್ಸನ್ನು ಕದ್ದು ತಂದ ಆರೋಪ – ತಂದೆ ಮಗನ ವಿರುದ್ಧ ದೂರು ದಾಖಲು !