ಕಡಲ್ಕೊರೆತ ಪ್ರದೇಶಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಕೋಟ : ಕಡಲ್ಕೊರೆತಕ್ಕೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಡಾ| ವಿದ್ಯಾಕುಮಾರಿ ಅವರು ಕೋಡಿ ಗ್ರಾ.ಪಂ. ವ್ಯಾಪ್ತಿಯ ಹೊಸಬೆಂಗ್ರೆ ಲೈಟ್‌ಹೌಸ್‌ ಹಾಗೂ ಕೋಟ ಗ್ರಾ.ಪಂ. ವ್ಯಾಪ್ತಿಯ ಮಣೂರು ಪಡುಕರೆ ವಿವಿಧ ಭಾಗಗಳಿಗೆ ಭೇಟಿ ನೀಡಿದರು.

ಕೋಟ ಹೋಬಳಿಯ ವಿವಿಧ ಕಡೆಗಳಲ್ಲಿ ನಿರಂತರ ಕಡಲ್ಕೊರೆತದಿಂದ ತೀರ ಪ್ರದೇಶಕ್ಕೆ ಹಾನಿ ಉಂಟಾಗುತ್ತಿದ್ದು, ಈ ಬಗ್ಗೆ ಶಾಶ್ವತ ಪರಿಹಾರ ಅಗತ್ಯವಿದೆ. ಪ್ರಸ್ತುತ ಜಿಲ್ಲೆಯ ಪ್ರಮುಖ ಕಡಲ್ಕೊರೆತ ಪ್ರದೇಶಗಳಲ್ಲಿ ಪರಿಹಾರಕ್ಕೆ 5 ಕೋಟಿ ರೂ. ಅನುದಾನ ಮೀಸಲಿರಿಸಿದ್ದು, ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಡಳಿತ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಮೀನುಗಾರಿಕೆ ಇಲಾಖೆ ಎಂಜಿನಿಯರ್‌ ಡಯಾಸ್‌, ಎ.ಇ.ಇ. ಶೋಭಾ, ಸ್ಥಳೀಯ ಗ್ರಾ.ಪಂ. ಪ್ರತಿನಿಧಿಗಳು ಜತೆಗಿದ್ದರು.

Related posts

ಮಣಿಪಾಲದಲ್ಲಿ ಸಂಚಾರ ನಿಯಮ ಉಲ್ಲಂಘನೆ: ಐವರು ವಿದ್ಯಾರ್ಥಿಗಳು ಒಂದೇ ದ್ವಿಚಕ್ರ ವಾಹನದಲ್ಲಿ!

ಗ್ಯಾಸ್ ಹಚ್ಚುವಾಗ ಬೆಂಕಿ ತಗುಲಿ ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು

ಜನಿವಾರ ತೆಗೆಸಿದ ಪ್ರಕರಣ – ಒಂದು ಸಮಾಜದ ಮೇಲೆ ದಬ್ಬಾಳಿಕೆ ಸರಿಯಲ್ಲ : ಕೋಟ