ಕೂಳೂರು ನದಿಯಲ್ಲಿ ಮುಮ್ತಾಜ್ ಅಲಿ ಮೃತದೇಹ ಪತ್ತೆ

ಮಂಗಳೂರು : ನಗರದ ಕೂಳೂರು ಸೇತುವೆ ಬಳಿ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದ ಮಾಜಿ ಶಾಸಕ ಮೊಯ್ದೀನ್ ಬಾವಾ ಅವರ ಸಹೋದರ ಉದ್ಯಮಿ ಮುಮ್ತಾಝ್ ಅಲಿಯವರ ಮೃತದೇಹ ಕೂಳೂರಿನ ಫಲ್ಗುಣಿ ನದಿಯಲ್ಲಿ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ. ತಕ್ಷಣ ಮೃತದೇಹವನ್ನು ನಗರದ ಎ.ಜೆ.ಆಸ್ಪತ್ರೆಗೆ ರವಾನಿಸಲಾಗಿದೆ.

ರವಿವಾರ ಬೆಳಗ್ಗೆ ಉಡುಪಿ – ಮಂಗಳೂರಿನ ಕೂಳೂರು ಸೇತುವೆಯ ಮೇಲೆ ಮುಮ್ತಾಝ್ ಅವರ ಕಾರು ಅಪಘಾತಗೊಂಡ ರೀತಿಯಲ್ಲಿ ಕುಳೂರು ಸೇತುವೆಯ ಪತ್ತೆಯಾಗಿತ್ತು. ಆದರೆ ಅವರು ಫೋನ್ ಅನ್ನು ಕಾರಿನಲ್ಲಿಯೇ ಇಟ್ಟು ನಾಪತ್ತೆಯಾಗಿದ್ದರು. ಆದ್ದರಿಂದ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂಬ ಶಂಕೆಯಲ್ಲಿ ಕೂಳೂರಿನ ಫಲ್ಗುಣಿ ನದಿಯಲ್ಲಿ ರವಿವಾರ ಬೆಳಗ್ಗೆ 8ಗಂಟೆಯಿಂದಲೇ ಹುಡುಕಾಟ ನಡೆಸಲಾಗಿತ್ತು. ಸೋಮವಾರ ಬೆಳಗ್ಗೆ ಸೇತುವೆಯ ಬಳಿಯಲ್ಲಿ ಮೃತದೇಹ ತೇಲುತ್ತಿತ್ತು. ಇದು ಕಾರ್ಯಾಚರಣೆ ನಡೆಸುತ್ತಿದ್ದ ತಂಡಕ್ಕೆ ಗೋಚರವಾಗಿದ್ದು, ಅವರು ಮೃತದೇಹವನ್ನು ಮೇಲಕ್ಕೆತ್ತಿ ತಂದಿದ್ದಾರೆ.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಮಾರಿದ ಹಳೆಯ ಬಸ್ಸನ್ನು ಕದ್ದು ತಂದ ಆರೋಪ – ತಂದೆ ಮಗನ ವಿರುದ್ಧ ದೂರು ದಾಖಲು !

ನಾಪತ್ತೆಯಾಗಿರುವ ಮೀನುಗಾರನ ಕುಟುಂಬಕ್ಕೆ ಪರಿಹಾರ ಒದಗಿಸಲು ಗಂಟಿಹೊಳೆ ಆಗ್ರಹ