ಇಂದಿರಾ ಕ್ಯಾಂಟೀನ್ ಪರಿಸರದಲ್ಲಿ ಖಾಸಗಿ ಬಸ್ ನಿರ್ವಾಹಕನ ಮೃತದೇಹ ಪತ್ತೆ; ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಶಂಕೆ

ಮಂಗಳೂರು : ಸ್ಟೇಟ್‌ಬ್ಯಾಂಕ್ ಬಳಿ ಇರುವ ಇಂದಿರಾ ಕ್ಯಾಂಟೀನ್ ಪರಿಸರದಲ್ಲಿ ಖಾಸಗಿ ಬಸ್ ನಿರ್ವಾಹಕರೊಬ್ಬರ ಮೃತದೇಹ ಕೊಲೆಗೈದ ಸ್ಥಿತಿಯಲ್ಲಿ ಸೋಮವಾರ ಪತ್ತೆಯಾಗಿರುವ ಘಟನೆ ವರದಿಯಾಗಿದೆ.

ಮೃತ ದುರ್ದೈವಿಯನ್ನು ಮಂಗಳೂರು-ವಿಟ್ಲ ನಡುವೆ ಸಂಚರಿಸುವ ಖಾಸಗಿ ಬಸ್‌ನಲ್ಲಿ ನಿರ್ವಾಹಕರಾಗಿದ್ದ ರಾಜೇಶ್ (30) ಎಂದು ಗುರುತಿಸಲಾಗಿದೆ.

ಯಾವುದೋ ವಿಚಾರಕ್ಕೆ ಗಲಾಟೆಯಾಗಿ ಅಥವಾ ಲೂಟಿ ಮಾಡುವ ಸಂದರ್ಭ ಪ್ರತಿರೋಧ ಒಡ್ಡಿರುವುದಕ್ಕೆ ದುಷ್ಕರ್ಮಿಗಳು ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಮೃತದೇಹವನ್ನು ವೆನ್‌ಲಾಕ್ ಶವಾಗಾರದಲ್ಲಿಡಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಈ ಕುರಿತು ಪಾಂಡೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಕರ್ನಾಟಕ ಕ್ರೀಡಾಕೂಟದಲ್ಲಿ ಸಮರಾಗೆ ಚಿನ್ನದ ಪದಕ

ಮಾರಿದ ಹಳೆಯ ಬಸ್ಸನ್ನು ಕದ್ದು ತಂದ ಆರೋಪ – ತಂದೆ ಮಗನ ವಿರುದ್ಧ ದೂರು ದಾಖಲು !

ತಾಯಿ ಹಾಗೂ ಇಬ್ಬರು ಮಕ್ಕಳು ನಾಪತ್ತೆ