ಅಪರಿಚಿತ ವ್ಯಕ್ತಿ ಮೃತ್ಯು : ಸಂಬಂಧಿಕರಿಗೆ ಸೂಚನೆ

ಉಡುಪಿ : ನಿಟ್ಟೂರು ರಾಷ್ಟ್ರೀಯ ಹೆದ್ದಾರಿ ಸನಿಹದ ಸರಕಾರಿ ಜಾಗದಲ್ಲಿರುವ, ಪಾಳುಬಿದ್ದ ಶೆಡ್ಡಿನಲ್ಲಿ ಅಸ್ವಸ್ಥ ಸ್ಥಿತಿಯಲ್ಲಿದ್ದ, ಅಪರಿಚಿತ ವ್ಯಕ್ತಿಯನ್ನು ಸಮಾಜಸೇವಕ ನಿತ್ಯಾನಂದ‌ ಒಳಕಾಡು ಅವರು, ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದರು. ರೋಗಿಯನ್ನು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದನ್ನು ಧೃಡಿಕರಿಸಿದರು.

‌‌‌ಮೃತ ವ್ಯಕ್ತಿ ಶಿವಮೊಗ್ಗ ಜಿಲ್ಲೆಯ ವಲಸೆ ಕಾರ್ಮಿಕ ಮೈಲಾರಿ ಎಂದು ತಿಳಿದುಬಂದಿದೆ. ಯಾವೊದೋ ಕಾಯಿಲೆಯಿಂದ ಮೃತಪಟ್ಟಿರುವ‌ ಶಂಕೆ ವ್ಯಕ್ತವಾಗಿದೆ. ಶವವನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದೆ. ಸಂಬಂಧಿಕರು ಉಡುಪಿ ನಗರ ಪೋಲಿಸ್ ಠಾಣೆ, ಅಥವಾ ಜಿಲ್ಲಾಸ್ಪತ್ರೆಯನ್ನು ಸಂಪರ್ಕಿಸಲು ಸೂಚಿಸಲಾಗಿದೆ.

Related posts

ಮರದ ದಿಮ್ಮಿಗೆ ಮೀನುಗಾರಿಕಾ ಬೋಟ್ ಡಿಕ್ಕಿ : ಅಪಾರ ಹಾನಿ

ಮೆಸ್ಕಾಂ ಎಟಿಪಿ ಬಿಲ್ ಪಾವತಿ ಸೇವೆ ಪುನರಾರಂಭಿಸಿ : ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ

ಸಿಬಿಐ ಅಧಿಕಾರಿ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ