ಬಳ್ಳಾರಿ ಆಸ್ಪತ್ರೆಯಲ್ಲಿ ಗರ್ಭಿಣಿಯರ ಸಾವು – ಇಂದು ಸಿಎಂ ನೇತೃತ್ವದಲ್ಲಿ ಸಭೆ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ : ಬಳ್ಳಾರಿ ಸರಕಾರಿ ಆಸ್ಪತ್ರೆಯಲ್ಲಿ ಕಳೆದ ಕೆಲ ದಿನಗಳಲ್ಲಿ ಸಂಭವಿಸಿದ ಗರ್ಭಿಣಿಯರ ಸಾವಿನ ಗಂಭೀರ ವಿಷಯದ ಕುರಿತು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಭೆ ನಡೆಯಲಿದ್ದು ಇದರಲ್ಲಿ ತಪ್ಪಿತಸ್ಥರ ವಿರುದ್ದ ತೆಗೆದುಕೊಳ್ಳಬೇಕಾದ ಶಿಸ್ತುಕ್ರಮದ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಭಾಗವಹಿಸಲು ಜಿಲ್ಲಾ ಉಸ್ತುವಾರಿ ಸಚಿವೆಯಾಗಿ ಉಡುಪಿಗೆ ಆಗಮಿಸಿರುವ ಹೆಬ್ಬಾಳ್ಕರ್ ತನ್ನ ಗೃಹ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತಿದ್ದರು.

ಹಾಸನದಲ್ಲಿ ಕಾಂಗ್ರೆಸ್ ಸಮಾವೇಶಕ್ಕೆ ಕೆಲವರ ಭಿನ್ನಮತದ ಕುರಿತ ವರದಿಗೆ ಉತ್ತರಿಸಿದ ಸಚಿವೆ, ಕಾಂಗ್ರೆಸ್‌ನಲ್ಲಿ ಯಾವುದೇ ಭಿನ್ನಮತ ಇಲ್ಲ. ಭಿನ್ನಮತ ಇರೋದು ಬಿಜೆಪಿಯಲ್ಲಿ ಮಾತ್ರ. ಬಿಜೆಪಿ ಭಿನ್ನಮತದ ಬಗ್ಗೆ ಮಾಧ್ಯಮಗಳೇ ದಿನಾ ತೋರಿಸುತ್ತಿವೆ ಎಂದು ಹೇಳಿದರು.
ನಮ್ಮಲ್ಲಿ ಭಿನ್ನಮತ ಇಲ್ಲ ಅನ್ನೋದಕ್ಕೆ ಉಪಚುನಾವಣೆಯ ಫಲಿತಾಂಶವೇ ಉತ್ತರ ಎಂದು ಅವರು ಹೇಳಿದರು.

Related posts

ಉಡುಪಿ ಜಿಲ್ಲೆಯಲ್ಲಿ ಉಪವಾಸ, ಧ್ಯಾನದೊಂದಿಗೆ ಗುಡ್ ಫ್ರೈಡೆ ಆಚರಣೆ

ಬಿಎಸ್‌ಎನ್‌ಎಲ್ ಸಂಪರ್ಕದ ಕುಂದು ಕೊರತೆ, ಗುಣಮಟ್ಟ ಉತ್ತಮಗೊಳಿಸುವಿಕೆ ಸಭೆಯಲ್ಲಿ ಸಂಸದ ಕೋಟ ಭಾಗಿ

ನೇತ್ರಾವತಿ ಹೋರಾಟಕ್ಕೆ ಸಜ್ಜು – ತೋನ್ಸೆ ಜಯಕೃಷ್ಣ ಶೆಟ್ಟಿ